spot_img
Monday, March 30, 2026
spot_img

ಕುಂದಾಪುರ ತಾ. ಯುವ ಬಂಟರ ಸಂಘದ ದಶಮ ಸಂಭ್ರಮ, ನೂತನ ಪದಾಧಿಕಾರಿಗಳ ಪದಪ್ರದಾನ

ಕುಂದಾಪುರ: ಬಂಟ ಸಮಾಜದಲ್ಲಿ ಅದ್ಬುತವಾದ ಸಂಘಟನೆ ಶಕ್ತಿ ಇದೆ. ಉನ್ನತ ಸ್ಥಾನಮಾನಗಳನ್ನು ಸಮಾಜದ ಯುವಜನತೆ ಪಡೆಯಬೇಕು. ಬಂಟ ಸಮಾಜದ ಯುವ ಜನಾಂಗ ಐ‌ಎ‌ಎಸ್ ನಂತಹ ಅಧಿಕಾರಿಗಳಾಗಿ ಮೂಡಿಬರಬೇಕು ಎಂದು ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು.

ಅವರು ಜೂ.4ರಂದು ಕುಂದಾಪುರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿದರು. ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಜೊತೆ ಕಾರ್ಯದರ್ಶಿ ಸಂಪಿಗೇಡಿ ಸಂಜೀವ ಶೆಟ್ಟಿ ದಶಮ ಕಾರ್ಯಕ್ರಮಕ್ಕೆ ಲಾಂಛನ ಅನಾವರಣ ಮಾಡಿದರು.

ಕುಂದಾಪುರ ಯುವ ಬಂಟರ ಸಂಘದ ಗೌರವಧ್ಯಕ್ಷ ಡಾ.ರಂಜನ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ನಿರ್ಗಮನ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ ಹೇರಿಕುದ್ರು, ಪ್ರ.ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಮಚ್ಚಟ್ಟು, ಕೋಶಾಧಿಕಾರಿ ನಿತಿನ್ ಕುಮಾರ್ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಬೆಂಗಳೂರು ಬಂಟರ ಸಂಘದ ಕೋಶಾಧಿಕಾರಿ ದೀಪಕ್ ಕುಮಾರ್ ಶೆಟ್ಟಿ ಬಾರ್ಕೂರು ಆಶಯ ನುಡಿಗಳ್ನಾಡಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೊ-ಆಪರೇಟಿವ್ ನಿರ್ದೇಶಕ ಬಿ.ಅರುಣ್ ಕುಮಾರ್ ಶೆಟ್ಟಿ, ಬಂಟರ ಯಾನೆ ನಾಡವರ ಸಂಘ ತೋನ್ಸೆ ವಲಯದ ಅಧ್ಯಕ್ಷ ಮನೋಹರ ಶೆಟ್ಟಿ, ಯುವಮೇರೆಡಿಯನ್ ಕೋಟೇಶ್ವರ ಆಡಳಿತ ನಿರ್ದೇಶಕ ಬಿ.ಉದಯ ಕುಮಾರ್ ಶೆಟ್ಟಿ, ಕುಂದಾಪುರ ಬಂಟರ ಯಾನೆ ನಾಡವರ ಮಾತೃ ಸಂಘ ಸಹ ಸಂಚಾಲಕ ವಿಕಾಸ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ಯುವ ಬಂಟರ ಸಂಘದ ನೂತನ ಪದಾಧಿಕಾರಿಗಳಾದ ಗೌರವಾಧ್ಯಕ್ಷರು- ಉದಯ್ ಕುಮಾರ್ ಶೆಟ್ಟಿ, ಅಧ್ಯಕ್ಷರು- ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಪ್ರ.ಕಾರ್ಯದರ್ಶಿ ಸತೀಶ್ ಶೆಟ್ಟಿ ಬಸ್ರೂರು, ಕೋಶಾಧಿಕಾರಿ ಅಕ್ಷಯ್ ಹೆಗ್ಡೆ, ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ, ಚೇತನ್ ಕುಮಾರ್ ಶೆಟ್ಟಿ, ಪ್ರವೀಣ್ ಕುಮಾರ್ ಶೆಟ್ಟಿ, ಸಚೀನ್ ಕುಮಾರ್ ಶೆಟ್ಟಿ, ರಾಜೇಶ್ವರಿ ಆರ್ ಹೆಗ್ಡೆ, ಜೊತೆ ಕಾರ್ಯದರ್ಶಿ ಭರತ್ ರಾಜ್ ಶೆಟ್ಟಿ, ಭರತ್ ಕುಮಾರ್ ಶೆಟ್ಟಿ, ಜೊತೆ ಕೋಶಾಧಿಕಾರಿ ಸುಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸಂತೋಷ ಕುಮಾರ್ ಶೆಟ್ಟಿ, ರಾಜೀವ್ ಶೆಟ್ಟಿ, ಸುಕುಮಾರ್ ಶೆಟ್ಟಿ, ಮುರಳೀಧರ ಶೆಟ್ಟಿ, ಪ್ರೀತಿ ಸುನೀಲ್ ಶೆಟ್ಟಿ, ಗೌರವ ಸಲಹೆಗಾರರು ಸುಕೇಶ್ ಶೆಟ್ಟಿ, ಪ್ರವೀಣ್ ಕುಮಾರ್ ಶೆಟ್ಟಿ, ಸುನೀಲ್ ಕುಮಾರ್ ಶೆಟ್ಟಿ ಪದಪ್ರದಾನ ಸ್ವೀಕರಿಸಿದರು.

ಸಚಿನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಜಾರಾಮ್ ಶೆಟ್ಟಿ ಹೈಕಾಡಿ ಪ್ರಾಸ್ತಾವಿಕ ನುಡಿಗಳ್ನಾಡಿದರು. ಮನೋರಾಜ್ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!