spot_img
Wednesday, January 22, 2025
spot_img

ಸ್ವಯಂ ಪ್ರೇರಿತ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

ಕುಂದಾಪುರ: ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣ ಗುರು ಯುವಕ ಮಂಡಲ ಕುಂದಾಪುರ, ಭಾರತೀಯ ರೆಡ್‌ಕ್ರಾಸ್‌ನ ರಕ್ತನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಸ್ವಯಂ ಪ್ರೇರಿತ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ರವಿವಾರ ನಡೆಯಿತು.

ರೆಡ್‌ಕ್ರಾಸ್ ಕುಂದಾಪುರ ಘಟಕದ ಅಧ್ಯಕ್ಷ ಎಸ್. ಜಯಕರ ಶೆಟ್ಟಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನದ ಬಗೆಗಿನ ಅರಿವು, ಕಾಳಜಿ ಎಲ್ಲೆಡೆಗಳಲ್ಲಿ ಇನ್ನಷ್ಟು ಹೆಚ್ಚಾಗಬೇಕಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಮಾತನಾಡಿ, ನಮ್ಮ ಯುವಕ ಮಂಡಲವು ಬಹಳಷ್ಟು ವರ್ಷಗಳ ಹಿಂದೆಯೇ ಗರಿಷ್ಠ ಪ್ರಮಾಣದಲ್ಲಿ ರಕ್ತದಾನ ಮಾಡುವ ಮೂಲಕ ಮೆಚ್ಚುಗೆ ಗಳಿಸಿತ್ತು. ಈಗಲೂ ಅದೇ ಕೈಂಕರ್ಯವನ್ನು ಮುಂದುವರಿಸಿಕೊಂಡು ಬರುತ್ತಿದೆ ಎಂದರು.

ಆಹಾರ ಸುರಕ್ಷಿತ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ. ಪ್ರೇಮಾನಂದ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್. ಪೂಜಾರಿ, ಶ್ರೀ ನಾರಾಯಣ ಗುರು ಸಾಂಸ್ಕೃತಿಕ ಮತ್ತು ದತ್ತಿ ಸಂಸ್ಥೆಯ ಪ್ರ. ಕಾರ್ಯದರ್ಶಿ ಭಾಸ್ಕರ ವಿಠಲವಾಡಿ, ಶ್ರೀ ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಅಜಿತ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಬಸವ ಪೂಜಾರಿ, ಕೋಶಾಧಿಕಾರಿ ಸುನೀಲ್ ಪೂಜಾರಿ, ಪದಾಧಿಕಾರಿಗಳು, ಸದಸ್ಯರು, ಉಪಸ್ಥಿತರಿದ್ದರು.

ಸನ್ಮಾನ: ಕೆಲ ದಿನಗಳ ಹಿಂದೆ ಕೋಟೇಶ್ವರ ಸಮೀಪ ಬೆಳಗಿನ ಜಾವ ಸುಮಾರು 3.30 ರ ವೇಳೆಗೆ ಕಳ್ಳತನ ನಡೆಯುತ್ತಿದ್ದುದನ್ನು ಕಂಡು, ಕಳ್ಳರ ಬೆದರಿಕೆ ನಡುವೆಯೂ ಅಂಜದೆ, ಧೈರ್ಯದಿಂದ ಅಕ್ಕ-ಪಕ್ಕದವರಿಗೆಲ್ಲ ಮಾಹಿತಿ ತಿಳಿಸಿ, ಸಮಯ್ರಜ್ಞೆ ಮೆರೆದ ಬೀಜಾಡಿ ಗ್ರಾಮದ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಯ ಪುತ್ರ, ಪತ್ರಿಕೆ ವಿತರಕ, ಕಾಲೇಜು ವಿದ್ಯಾರ್ಥಿ ಅಜಯ್ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು.

ಈ ರಕ್ತದಾನ ಶಿಬಿರದಲ್ಲಿ ಸಂಗ್ರಹಿಸಲಾದ ರಕ್ತವನ್ನು ರಕ್ತನಿಧಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ರಾಜೇಶ್ ಕಡ್ಗಿಮನೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಅಜಿತ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!