spot_img
Wednesday, January 22, 2025
spot_img

ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ತಕ್ಷಣ ಶಿಕ್ಷಕರ ಒದಗಿಸಲು ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯಿಂದ ಮನವಿ

ಕುಂದಾಪುರ: ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ತಕ್ಷಣವೇ ಶಿಕ್ಷಕರನ್ನು ಒದಗಿಸಬೇಕು ಹಾಗೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಗೊಳಿಸಬೇಕೆಂದು ಕರ್ನಾಟಕ ರಾಜ್ಯದ ಶಿಕ್ಷಣ ಆಯುಕ್ತರಿಗೆ ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಉಡುಪಿ ಜಿಲ್ಲಾ ಎಸ್‌ಡಿ ಎಂಸಿ ಸಮನ್ವಯ ವೇದಿಕೆಯ ಪರವಾಗಿ ಮನವಿ ಸಲ್ಲಿಸಲಾಯಿತು.

ಈಗಾಗಲೇ ಶಾಲೆಗಳು ಪ್ರಾರಂಭಗೊಂಡಿದ್ದು ಮಕ್ಕಳಿಗೆ ಪಠ್ಯ ಪುಸ್ತಕ, ಸೈಕಲ್ ಹಾಗೂ ಸಮವಸ್ತ್ರ ಒದಗಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು, ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು ಕೂಡ ಭೇಟಿ ಮಾಡಿ ಸರಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳ ಕುಂದುಕೊರತೆಗಳ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಎಸ್ಡಿ‌ಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು, ಕಾರ್ಯದರ್ಶಿ ದೀಪಾ ಮಹೇಶ್, ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಎಸ್. ವಿ. ನಾಗರಾಜ್, ಜೊತೆ ಕಾರ್ಯ ದರ್ಶಿ ರಮ್ಯಾದಯಾನಂದ್, ಕೋಶಾಧಿಕಾರಿ ಕೃಷ್ಣಾನಂದ ಶಾನುಭಾಗ್, ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅವನೀಶ ಹೊಳ್ಳ, ಕಾರ್ಯದರ್ಶಿ ಜ್ಯೋತಿ ಶೆಟ್ಟಿ, ಜೊತೆ ಕಾರ್ಯದರ್ಶಿ ಹರಿಶ್ಚಂದ್ರ ಆಚಾರ್ಯ, ಕುಂದಾಪುರ ಪುರಸಭಾ ಘಟಕದ ಅಧ್ಯಕ್ಷರಾದ ಅಶ್ವತ್ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ವರದ ಅಂಕದಕಟ್ಟೆ, ನಾಗರತ್ನ ಶಿರೂರು, ರಾಘವೇಂದ್ರ ಹಂಗಳೂರು, ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!