spot_img
Monday, March 23, 2026
spot_img

ವಿ. ಕೆ. ಆರ್. ಪ್ರೌಢಶಾಲೆಯಲ್ಲಿ ‘ಹ್ಯಾಪಿ ಟೀನ್’ ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರ

ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ‘ಹ್ಯಾಪಿ ಟೀನ್’ ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರವನ್ನು ಜೂನ್ ೮ರಂದು ಏರ್ಪಡಿಸಲಾಗಿತ್ತು.

ಸಂಸ್ಥೆಯ ಹಳೆವಿದ್ಯಾರ್ಥಿನಿ ರ್‍ಯಾಂಕ್ ವಿಜೇತೆ ಡಾ. ಸ್ವಾತಿ ಶೇಟ್ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿದ್ಯಾರ್ಥಿನಿಯರ ಹದಿಹರೆಯದ ಸಮಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳಿಗೆ ಗಿಡಮೂಲಿಕೆಗಳ ಸಹಾಯದಿಂದ ಮನೆಮದ್ದುಗಳನ್ನು ಹೇಗೆ ತಯಾರಿಸಿಕೊಳ್ಳಬಹುದೆಂದು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್ ವಹಿಸಿದ್ದರು.

ಮುಖ್ಯ ಶಿಕ್ಷಕಿ ಶುಭಾ ಕೆ. ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಚೈತ್ರಾ ಎಮ್. ಪಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಿಕ್ಷಕಿಯರಾದ ಸರೋಜ ಆರ್., ಆಶಾಲತಾ ಎಸ್. ಶೆಟ್ಟಿ, ಪವಿತ್ರಾ ಎಸ್. ಪುತ್ರನ್, ರಂಜನಿ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!