spot_img
Thursday, April 2, 2026
spot_img

ಕೇಂದ್ರ ಸರಕಾರದಿಂದ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ-ಕುಂದಾಪುರ ಬ್ಲಾಕ್ ಕಾಂಗ್ರೆಸ್ ಖಂಡನೆ

ಕುಂದಾಪುರ: ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಮಣಿಸಲು ಬಳಸಿಕೊಂಡ ಸ್ವಾತಂತ್ರ್ಯ ನಂತರದ ಪ್ರಥಮ ಪ್ರಧಾನಿ ನರೇಂದ್ರ ಮೋಧಿ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ತಿಳಿಸಿದ್ದಾರೆ.

ವಿರೋಧ ಪಕ್ಷಗಳ ಮಣಿಸಲು ಸ್ವಾಯತ್ತ ಸಂಸ್ಥೆಗಳಾದ ಐಟಿ ,ಇಡಿ ಮತ್ತು ಸಿಬಿ‌ಐ ಯಂತಹ ಸಂಸ್ಥೆಗಳನ್ನು ಕಳೆದ 8 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋಧಿ ಮತ್ತು ಗೃಹ ಸಚಿವ ಅಮಿತ್ ಷಾ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಪ್ರಸ್ತುತ ದಿನಗಳಲ್ಲಿ ಕಾಂಗ್ರೆಸ್ ನಾಯಕರುಗಳನ್ನು ಮತ್ತು ದೇಶದ ವಿರೋಧ ಪಕ್ಷದ ಮುಖಂಡರನ್ನು ಮಣಿಸಲು ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಮಾಡಿ ದಾಳಿ ಮಾಡುವುದು ನಿರಂತರವಾಗಿ ನಡೆಯುತ್ತಾ ಬಂದಿದ್ದು, ಪ್ರಜೆಗಳ ಸ್ವಾತಂತ್ರ್ಯ ಕಿತ್ತುಕೊಂಡು ಅಧಿಕಾರ ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಇಂತಹ ಸರ್ವಾಧಿಕಾರಿ ಆಡಳಿತಕ್ಕೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹರಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!