spot_img
Thursday, April 2, 2026
spot_img

ವ್ಯವಸಾಯ ಸೇವಾ ಸಹಕಾರ ಸಂಘಗಳು ವ್ಯವಸಾಯಗಾರರ ಪರವಿರಬೇಕು-ಕೆ.ಪ್ರತಾಪಚಂದ್ರ ಶೆಟ್ಟಿ

ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ವಕ್ವಾಡಿ ಶಾಖೆ ಉದ್ಘಾಟನೆ


ಕುಂದಾಪುರ, ಜೂ.13: ವ್ಯವಸಾಯ ಸೇವೆಗೆ ಸಹಕಾರ ನೀಡುವ ಉದ್ದೇಶಕ್ಕೆ ಹುಟ್ಟಿಕೊಂಡ ಸಂಸ್ಥೆಗಳು ವ್ಯವಸಾಯ ಮಾಡುವ ರೈತರಿಗೆ ಸಹಕಾರ ನೀಡಬೇಕು. ಸಾಲ ನೀಡುವುದೇ ಏಕಮಾತ್ರ ಉದ್ದೇಶವಾಗಿರದೆ ರೈತರ ಇತರ ಬೇಡಿಕೆಗಳಿಗೂ ಸ್ಪಂದಿಸಬೇಕು. ರೈತರ ಸಮಸ್ಯೆಗಳಿಗೆ ಪರಿಹಾರ ವ್ಯವಸಾಯ ಸೇವಾ ಸಹಕಾರಿ ಸಂಘಗಳಿಂದಲೇ ಆಗಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಹೇಳಿದರು.


ಕಾಳಾವರ ಗ್ರಾ.ಪಂ.ನ ವಕ್ವಾಡಿಯ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ವಕ್ವಾಡಿ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಮಹೇಶ್ ಹೆಗ್ಡೆ ಮೊಳಹಳ್ಳಿ ಭದ್ರತಾ ಕೊಠಡಿ ಉದ್ಘಾಟಿಸಿ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘ ೧೯೭೬ರಲ್ಲಿ ಪ್ರಾರಂಭಗೊಂಡಂದಿನಿಂದ ಉತ್ತಮ ಸೇವೆ ನೀಡುತ್ತಾ ಅತ್ಯುತ್ತಮ ಸಹಕಾರಿ ಸಂಘ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಉತ್ತಮ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶರತ್ ಕುಮಾರ್ ಹೆಗ್ಡೆ ಶಾನಾಡಿ ಅವರು ಮಾತನಾಡಿ, ವಕ್ವಾಡಿಯಲ್ಲಿ ಶಾಖೆ ಆರಂಭಿಸಬೇಕು ಎನ್ನುವ ೪೦ ವರ್ಷಗಳ ಕನಸು ಈವತ್ತು ಈಡೇರುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಕಡಿಮೆ ಇಲ್ಲವೆನ್ನುವಂತೆ ಇಲ್ಲಿ ಶಾಖಾ ಕಛೇರಿ ಈ ಗ್ರಾಮೀಣ ಪ್ರದೇಶದಲ್ಲಿ ನಿರ್ಮಿಸಲಾಗಿದೆ. 11 ಕಂದಾಯ ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವ ನಮ್ಮೀ ಸಂಘವು ವಾರ್ಷಿಕ ಒಂದು ಕೋಟಿ ಲಾಭ ಗಳಿಸುವ ಸಂಸ್ಥೆಯಾಗಿದೆ. ಶೇ 100 ರಷ್ಟು ಸಾಲ ವಸೂಲಾತಿಯೂ ಆಗುತ್ತಿದೆ. ರೈತಾಪಿಗಳ ಪರವಾಗಿ ಮುಂದಿನ ದಿನಗಳಲ್ಲಿ ಹೊಸ ಯೋಜನೆಯನ್ನು ಆರಂಭಿಸಲು ಆಡಳಿತ ಮಂಡಳಿ ನಿರ್ಣಯ ಕೈಗೊಳ್ಳಲಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ ಕೆ.ಆರ್., ಕಾಳಾವರ ಗ್ರಾ.ಪಂ ಅಧ್ಯಕ್ಷೆ, ಸಂಘದ ನಿರ್ದೇಶಕಿ ಆಶಾಲತಾ ಶೆಟ್ಟಿ, ವಕ್ವಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವಿ.ರಾಜೀವ ಶೆಟ್ಟಿ, ಕಾಳಾವರ ಗ್ರಾ.ಪಂಉಪಾಧ್ಯಕ್ಷ ರಾಮಚಂದ್ರ ನಾವಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಉಪಾಧ್ಯಕ್ಷ ವಾದಿರಾಜ ಹತ್ವಾರ ತೆಕ್ಕಟ್ಟೆ, ಸಂಘದ ಆಡಳಿತ ಮಂಡಳಿ ಸದಸ್ಯರಾದ ಅಶೋಕ ಪೂಜಾರಿ ಬೀಜಾಡಿ, ಭರತ್ ಕುಮಾರ್ ಶೆಟ್ಟಿ ಕಾಳಾವರ, ಚಂದ್ರಶೇಖರ ಶೆಟ್ಟಿ ಕಾಳಾವರ, ಗೋಪಾಲ ಶೆಟ್ಟಿ ಹೆಚ್.ಕೊರ್ಗಿ, ಮೋಹನದಾಸ ಶೆಟ್ಟಿ ಮಲ್ಯಾಡಿ ತೆಕ್ಕಟ್ಟೆ, ನರಸಿಂಹ ಪೂಜಾರಿ ವಕ್ವಾಡಿ, ನವೀನಕುಮಾರ್ ಹೆಗ್ಡೆ ಶಾನಾಡಿ-ಕೆದೂರು, ಸುರೇಶ ಕೆ.ವಿ., ಕಾಳಾವರ, ಸುಧಾ ಬೀಜಾಡಿ, ಚಿಕ್ಕು ಅಸೋಡು, ವೃತ್ತಿಪರ ನಿರ್ದೇಶಕ ಗೋಪಾಲ ಪೂಜಾರಿ ಕುಂಭಾಶಿ, ವಲಯ ಮೇಲ್ವಿಚಾರಕ ಸಂದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಕಾಳಾವರ ಪ್ರೌಢಶಾಲೆ ವಿದ್ಯಾರ್ಥಿನಿ ನಿಶಾ ಜೋಗಿ ಅವರನ್ನು ಸನ್ಮಾನಿಸಲಾಯಿತು. ಗ್ರಾ.ಪಂ. ಅಧ್ಯಕ್ಷೆ ಆಶಾಲತಾ ಶೆಟ್ಟಿ, ವಕ್ವಾಡಿ ಶಾಖಾ ಕಟ್ಟಡ ನಿರ್ಮಾಣದಲ್ಲಿ ಶ್ರಮಿಸಿದ ರಮೇಶ ಶೆಟ್ಟಿ ವಕ್ವಾಡಿ, ನೂತನ ಶಾಖಾಧಿಕಾರಿ ನಾಗರಾಜ, ಸಂಘದ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಕೆದೂರು ಕರುಣಾಕರ ಶೆಟ್ಟಿ, ನಿವೃತ್ತ ಸಿಬ್ಬಂದಿ ಲಕ್ಷ್ಮೀ ಬಾಯಿ ಅವರನ್ನು ಗೌರವಿಸಲಾಯಿತು. ಸಂಘದ ವ್ಯಾಪ್ತಿಯಲ್ಲಿ ಆರಂಭಗೊಂಡ ನೂತನ ಸ್ವಸಹಾಯ ಸಂಘಗಳಿಗೆ ದಾಖಲಾತಿ ಪುಸ್ತಕ ಹಸ್ತಾಂತರಿಸಲಾಯಿತು.

ದಿವ್ಯಾ ಪ್ರಾರ್ಥಿಸಿದರು. ನಿರ್ದೇಶಕ ಭರತ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿಶ್ವೇಶ್ವರ ಐತಾಳ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸಂಘದ ವರದಿ ವಾಚಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿ, ಸಂಘದ ಸಿಬ್ಬಂದಿ ರಾಜಶೇಖರ ಶೆಟ್ಟಿ ಕೊರ್ಗಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!