spot_img
Sunday, May 17, 2026
spot_img

ಕೊಲ್ಲೂರು: ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದ ಅನುದಾನಿತ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ 2019-20,2020-21 ಮತ್ತು 2021-22 ರ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

2022-23ರ ಶೈಕ್ಷಣಿಕ ವರ್ಷದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಮತ್ತು 8,9, 10ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಗೆ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವರಮಕೃಷ್ಣ ಭಟ್ ಚಾಲನೆ ನೀಡಿದರು.

ಮುಖ್ಯೋಪಾಧ್ಯಾಯರಾದ ನಾಗರಾಜ್ ಭಟ್ ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ಮಂಗಳೂರು ವಾಣಿಜ್ಯ ತೆರಿಗೆ ಪರಿವೀಕ್ಷಕರಾದ ಹಳ್ನಾಡು ಪ್ರತಾಪ್‌ಚಂದ್ರ ಶೆಟ್ಟಿ ಅವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದೇವಳದ ಆಡಳಿತ ಮಂಡಳಿಯ ಸದಸ್ಯರಾದ ಡಾ.ಅತುಲ್ ಕುಮಾರ್ ಶೆಟ್ಟಿ , ಜಯಾನಂದ ಹೋಬಳಿದಾರ್ , ರತ್ನಾ ರಮೇಶ್ ಕುಂದರ್ , ಸಂಧ್ಯಾ ರಮೇಶ್ ಮತ್ತು ಶಾಲಾ ಹಿರಿಯ ಶಿಕ್ಷಕ ಕೃಷ್ಣ ಜಿ ಮತ್ತು ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ಶಾಲಾ ಸಿಬ್ಬಂದಿ ವರ್ಗ ಮತ್ತು ಶಾಲಾ ವಿದ್ಯಾರ್ಥಿನಿಲಯದ ಮೇಲ್ವಿಚಾರಕರು ಉಪಸ್ಥಿತರಿದ್ದರು.

ಶಾಲಾ ಸಹ ಶಿಕ್ಷಕ ಅಣ್ಣಪ್ಪ ನಾಯ್ಕ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅಭಿನೇತ್ರಿ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!