spot_img
Thursday, April 2, 2026
spot_img

ಕೊಲ್ಲೂರು ಪ್ರಾಥಮಿಕ ಶಾಲೆಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ

ಕೊಲ್ಲೂರು: ಧರ್ಮಪೀಠ ಕೊಲ್ಲೂರು ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲೂರು ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣಾ ಕಾರ್ಯಕ್ರಮ ಸೋಮವಾರ ಶಾಲಾ ಸಭಾಂಗಣದಲ್ಲಿ ಜರುಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಅಡಿಗ ವಹಿಸಿ ಶುಭ ಹಾರೈಸಿದರು.

ಈ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ದೀಪದಂತೆ ಬೆಳಗಿ ಎಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಧರ್ಮಪೀಠದ ಅಧ್ಯಕ್ಷರಾದ ಶಶಿಸ್ವಾಮಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಭಟ್, ಮಾಜಿ ತಾಲೂಕು ಪಂಚಾಯತ್ ಸದಸ್ಯರುಗಳಾದ ಕೆ ರಮೇಶ್ ಗಾಣಿಗ, ಗ್ರೀಷ್ಮಾ ಗಿರಿಧರ್ ಭಿಡೆ ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಗೋವಿಂದ ಜೆ , ಯೋಗೇಶ್ ಭಟ್ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕರಾದ ಪೂಜಾ ಮತ್ತು ಶಾರದಾ ಸಹಕರಿಸಿದರು. ಶಾಲೆಗೆ ಅಗತ್ಯ ಇರುವ ಬೇಡಿಕೆಯ ಪಟ್ಟಿಯನ್ನು ಶಾಲಾ ಶಿಕ್ಷಕ ವಾಸು ವಾಚಿಸಿದರು. ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶಾರದಾ ಸ್ವಾಗತಿಸಿದರು, ಶಿಕ್ಷಕಿ ಶೈಲಜಾ ನಿರೂಪಿಸಿದರು, ಶಿಕ್ಷಕಿ ನಿರ್ಮಲಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!