Sunday, September 8, 2024

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ 11 ರಂದು ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿಯವರು 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಪೋಷಕರಿಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆ ಯನ್ನು ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು.

ಸಭೆಯಲ್ಲಿ ವೆಂಕಟರಮಣ ಪ್ರೌಢ ಶಾಲಾ ವಿಭಾಗದ ಮುಖ್ಯಸ್ಥರಾದ ಕೃಷ್ಣ ಅಡಿಗ, ವೆಂಕಟರಮಣ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕರರಾದ ರಮಾಕಾಂತ ರೇವಣಕರ್ ಉಪಸ್ಥಿತರಿದ್ದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭಾಗ್ ಸ್ವಾಗತಿಸಿದರು, ಉಪ ಪ್ರಾಂಶುಪಾಲೆ ಮಮತಾ ರೈ ವಂದಿಸಿದರು, ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!