spot_img
Monday, March 23, 2026
spot_img

ದುಬೈಯಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ “ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್” ಪ್ರದಾನ

ಮಂಗಳೂರು: ಮೈಲ್‌ಸ್ಟೋನ್ ಗ್ಲೋಬಲ್ ಅಚೀವರ್ಸ್ ಫೋರಮ್ ಲಖನೌ ನೀಡಿದ ಇಂಟರ್‌ನ್ಯಾಶನಲ್ ವರ್ಲ್ಡ್ “ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್”ನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿ ಸಿ ಬ್ಯಾಂಕ್) ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು ಜೂ.15ರಂದು ದುಬೈಯಲ್ಲಿ ಸ್ವೀಕರಿಸಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮೈಲ್ ಸ್ಟೋನ್ ಗ್ಲೋಬಲ್ ಅಚೀವರ್ಸ್ ಸಂಸ್ಥೆ ನೀಡುತ್ತಿದ್ದು, ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾರ್ಥಕ ಸೇವೆಯ ಜೊತೆಗೆ ಅದ್ಭುತ ಸಾಧನೆಗೈದಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಮೈಲ್ ಸ್ಟೋನ್ ಗ್ಲೋಬಲ್ ಅವಾರ್ಡ್‌ನ್ನು ಪ್ರಿನ್ಸ್ ಸುಹೇಲ್ ಮೊಹಮ್ಮದ್ ಅಲ್ ಝರೂನಿ ಪ್ರದಾನ ಮಾಡಿದರು.

ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಾರಥ್ಯದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳೊಂದಿಗೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಜನಸಾಮಾನ್ಯರ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಎಸ್ ಸಿಡಿಸಿಸಿ ಬ್ಯಾಂಕ್ ರಾಜೇಂದ್ರ ಕುಮಾರ್ ಅವರ ಸಮರ್ಥ ಕಾರ್ಯ ವೈಖರಿಯಿಂದಲೇ “ಜನಸ್ನೇಹಿ” ಬ್ಯಾಂಕ್ ಎನಿಸಿಕೊಂಡಿದೆ. ಕಳೆದ 28 ವರ್ಷಗಳಿಂದ ಬ್ಯಾಂಕಿನ ಅಧ್ಯಕ್ಷರಾಗಿ ಅಮೋಘ ಸಾಧನೆಗೈದಿರುವ ಇವರು , ಎಸ್ ಸಿಡಿಸಿಸಿ ಬ್ಯಾಂಕ್‌ನ್ನು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸರಿಸಮಾನವಾಗಿ ಬೆಳೆಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕ್ 111 ಶಾಖೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಂದಿದ್ದು ಆ ಭಾಗದ ಜನರ ಆರ್ಥಿಕ ಶಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ನವೋದಯ ಸ್ವಸಹಾಯ ಗುಂಪುಗಳ ಮೂಲಕ ಗ್ರಾಮೀಣ ಮಹಿಳೆಯರಲ್ಲಿ ಆರ್ಥಿಕ ಸಬಲೀಕರಣದ ಚೈತನ್ಯ ಮೂಡಿಸಿದ ಹೆಗ್ಗಳಿಕೆ ರಾಜೇಂದ್ರ ಕುಮಾರ್ ಅವರದ್ದು. ಜನೋಪಯೋಗಿ ಕಾರ್ಯನಿರ್ವಹಣೆಯ ಮೂಲಕ ಎಸ್ ಸಿಡಿಸಿಸಿ ಬ್ಯಾಂಕಿನ ಪ್ರಗತಿಗೆ ಕಾರಣರಾಗಿರುವ ಇವರು ಹಲವಾರು ರಾಷ್ಟ್ರೀಯ, ಅಂತರರಾಷ್ಟ್ರೀಯ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಲ್ ಸ್ಟೋನ್ ಗ್ಲೋಬಲ್ ಅಚೀವರ್ಸ್ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ. ಮಲಿಕ್, ನವದೆಹಲಿಯ ಅರ್ಥಶಾಸ್ತ್ರಜ್ಞ ರಾಜೇಂದ್ರ ಕುಮಾರ್ ರಾಜ್ ಮೊದಲಾದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಮುಖ್ಯಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ, ಹಾಗೂ ಜಯಪ್ರಕಾಶ್ ತುಂಬೆ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!