Sunday, September 8, 2024

ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಗಣಕಯಂತ್ರ ಪ್ರಯೋಗಾಲಯ ಉದ್ಘಾಟನೆ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕಯಂತ್ರ ಪ್ರಯೋಗಾಲಯದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.

ಮಹಾಬಲೇಶ್ವರ ಎಮ್.ಎಸ್., ಎಮ್.ಡಿ. ಮತ್ತು ಸಿ.ಇ.ಒ. ಕರ್ನಾಟಕ ಬ್ಯಾಂಕ್ ಮಂಗಳೂರು ಇವರು ಉದ್ಘಾಟಿಸಿ ಶುಭ ಹಾರೈಸಿದರು. ಅವರು ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಡಿ, ಇಷ್ಟಪಟ್ಟು ಓದಿ, ಆದರೆ ಚಾತುರ್‍ಯತೆಯಿಂದ ಕೆಲಸ ಮಾಡಲು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಉಪಸ್ಥಿತರಿದ್ದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಮ್. ಸುಕುಮಾರ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಸುಧಾಕರ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು, ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!