spot_img
Thursday, April 2, 2026
spot_img

ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

ಗಂಗೊಳ್ಳಿ: ಯೋಗವನ್ನು ನಾವು ಕಲಿಯುವುದರ ಜೊತೆಜೊತೆಗೆ   ಮುಂದಿನ ಪೀಳಿಗೆಯವರಿಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಈ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಶ್ರೀನಿವಾಸ ಖಾರ್ವಿ ಅಭಿಪ್ರಾಯಪಟ್ಟರು.

 ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾರ ಪ್ರಾಂಶುಪಾಲರಾದ ಥಾಮಸ್ ಪಿ.ಎ ವಹಿಸಿದ್ದರು. ಶ್ರೇಯಾ ಖಾರ್ವಿ ಮತ್ತು ನೇಹಾ ಕೊಡೇರಿ ಯೋಗ ದಿನಾಚರಣೆಯ ಕುರಿತು ಮಾತನಾಡಿದರು.

 ವಿದ್ಯಾರ್ಥಿನಿಯರಾದ ವೀಕ್ಷಿತಾ, ಪೂರ್ವಿ ಮತ್ತು ಅನನ್ಯ ಯೋಗ ಪ್ರಾತ್ಯಕ್ಷಿಕೆ ನೀಡಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!