spot_img
Monday, March 23, 2026
spot_img

ಕೊಲ್ಲೂರು ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕೊಲ್ಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲೂರು ವತಿಯಿಂದ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆ ಶಾಲಾ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಶಾಲಾಭಿವೃದ್ಧಿ ಸಮಿತಿಯ ಮಾಜಿ ಸದಸ್ಯೆ ಗ್ರೀಷ್ಮಾ ಗಿರಿಧರ್ ಭಿಡೆ ಅವರ ಮಗ 7ನೇ ತರಗತಿವರೆಗೆ ಶಿಕ್ಷಣ ಪಡೆದ ಪ್ರಯುಕ್ತ ಶಾಲೆಗೆ ವೈಯಕ್ತಿಕವಾಗಿ ೩ ಕುಡಿಯುವ ನೀರಿನ ಡ್ರಮ್ ನೀಡಿದರು.

ಶಾಲಾಭಿವೃದ್ಧಿ ಸಮಿತಿ ಮತ್ತು ಪ್ರಾಥಮಿಕ ಶಾಲಾ ವತಿಯಿಂದ ಗ್ರೀಷ್ಮಾ ಗಿರಿಧರ್ ಭಿಡೆ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಅಡಿಗ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಶಾರದಾ ಪ್ರಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಭಟ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಯೋಗೇಶ್ ಭಟ್, ಗೋವಿಂದ, ನೇತ್ರಾವತಿ, ಶೋಭಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ನಿರ್ಮಲಾ ಸ್ವಾಗತಿಸಿದರು, ಶಿಕ್ಷಕಿ ಸುಮಿತ್ರ ನಿರೂಪಿಸಿದರು. ಶಿಕ್ಷಕಿ ರಾಜೇಶ್ವರಿ ವಂದಿಸಿದರು. ಶಿಕ್ಷಕ ವಾಸು ಯೋಗ ತರಬೇತಿ ನೀಡಿದರು.

ಶಿಕ್ಷಕಿ ಶೈಲಜಾ, ಅತಿಥಿ ಶಿಕ್ಷಕಿಯರಾದ ಪೂಜಾ, ಶಾರದಾ ಉಪಸ್ಥಿತರಿದ್ದರು. ತದನಂತರ ಶಾಲಾ ವಿದ್ಯಾರ್ಥಿಗಳಿಂದ ಯೋಗ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!