spot_img
Thursday, May 7, 2026
spot_img

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಹಟ್ಟಿಯಂಗಡಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಮತ್ತು ವಿಜಯ ಕರ್ನಾಟಕ ದಿನಪತ್ರಿಕೆಯ ಸಹಯೋಗದೊಂದಿಗೆ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗದಿನವನ್ನು ಜೂ.21ರಂದು ಆಚರಿಸಲಾಯಿತು.

ಹಟ್ಟಿಯಂಗಡಿ ಗ್ರಾಮ ಪಂಚಾಯತ್‌ನ ಸದಸ್ಯರಾದ ಕೆ.ರಾಜೀವ ಶೆಟ್ಟಿಯವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ವೇದಮೂರ್ತಿ ಹೆಚ್ ಬಾಲಚಂದ್ರ ಭಟ್ಟರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಯೋಗದ ಮಹತ್ವವನ್ನು ಜಗದಗಲ ಹಬ್ಬಿಸಿದ ಕೀರ್ತಿ ಭಾರತದ್ದು. ಯೋಗವು ಮನಸ್ಸಿನ ಕ್ಲೇಶಗಳನ್ನು ನಿವಾರಿಸುತ್ತದೆ. ಮನಸ್ಸು ಸದಾ ಆಹ್ಲಾದತೆಯಿಂದ ಕೂಡಿರುವಂತೆ ಮಾಡುತ್ತದೆ. ಯೋಗದ ಆಸನಗಳನ್ನು ಕರಗತ ಮಾಡಿಕೊಂಡವನು ಎಲ್ಲಾ ವಿಧದ ಯಶಸ್ಸನ್ನು ಸಿದ್ಧಿಸಿಕೊಳ್ಳುತ್ತಾನೆ, ಹಾಗಾಗಿ ನಮ್ಮ ಯೋಗಾಭ್ಯಾಸ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ಅದೊಂದು ನಿತ್ಯ ಅಭ್ಯಾಸವಾಗಿರಲಿ ಎಂದರು. ನಂತರ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಮೂಹಿಕ ಯೋಗಾಭ್ಯಾಸ ನಡೆಸಿ, ಹರ್ಷಿತರಾದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕುಂದಾಪುರದ ಆಯುಷ್ ಆಯುರ್ವೇದ ಆಶ್ರಮದ ಸುಪರಿಂಡೆಂಟ್ ಡಾ. ಸೋನಿ ಡಿಕಾಸ್ಟ ಸಭೆಯನ್ನುದ್ದೇಶಿಸಿ ಯೋಗವು ಭಾರತದ ಋಷಿಮುನಿಗಳ ಅಮೂಲ್ಯ ಕೊಡುಗೆಯಾಗಿದ್ದು, ಯೋಗವೆಂದರೆ ನಿಯಂತ್ರಣ ಎಂದರ್ಥ. ಯೋಗ ಸಾಧನೆಯಿಂದ ಶರೀರ ಮತ್ತು ಮನಸ್ಸುಗಳ ಮೇಲೆ ನಿಯಂತ್ರಣವನ್ನು ಸಾಧಿಸಲು ಸಾಧ್ಯವಿದೆ. ಉತ್ತಮ ಏಕಾಗ್ರತೆಯನ್ನು ಸಂಪಾದಿಸಿಕೊಳ್ಳಲು, ದೀರ್ಘಾಯುಷ್ಯವನ್ನು ಹೊಂದಲು, ದೇಹದ ಎಲ್ಲಾ ಭಾಗಗಳನ್ನು ಸಕ್ರೀಯವಾಗಿರಿಸಲು, ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ನಿತ್ಯವೂ ಯೋಗಾಭ್ಯಾಸ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಕುಂದಾಪುರದ ಸಾತ್ವಿಕ್ ಆಯುರ್ವೇದ ಕ್ಲೀನಿಕ್‌ನ ವೈದ್ಯರಾದ ಡಾ. ಸುಬ್ರಹ್ಮಣ್ಯ ಭಟ್ ವಿದ್ಯಾರ್ಥಿಗಳಿಗೆ ಜ್ಞಾನಯೋಗ, ಭಕ್ತಿಯೋಗ ಮತ್ತು ಕರ್ಮಯೋಗಗಳ ಕುರಿತಂತೆ ವಿವಿಧ ನಿದರ್ಶನಗಳ ಮೂಲಕ ಮಾಹಿತಿ ನೀಡಿದರು.

ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರರಾದ ಜಾನ್ ಡಿಸೋಜಾ ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ವಿಜಯ ಕರ್ನಾಟಕ ಪತ್ರಿಕೆಯು ಕೇವಲ ಸುದ್ಧಿಯನ್ನು ಮಾತ್ರ ಬಿತ್ತರಿಸದೆ, ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತಿದೆ. ಅನೇಕ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಬಳಿ ಸಾಗಿ ಅವರಲ್ಲಿ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ. ಅಂತಾರಾಷ್ಟ್ರೀಯ ಯೋಗದಿನವನ್ನು ಹಟ್ಟಿಯಂಗಡಿ ವಸತಿ ಶಾಲೆಯಲ್ಲಿ ಆಯೋಜಿಸುವ ಮೂಲಕ ಮಕ್ಕಳಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುವ ಪ್ರಯತ್ನ ಮಾಡಿದ್ದೇವೆ ಎಂದರು.

ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಆಪ್ತ ಸಮಾಲೋಚಕಿ ಹೇಮಮಾಲಿನಿ, ದೈಹಿಕ ಶಿಕ್ಷಕರು, ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನೇಹಾ ಬಿ ಸ್ವಾಗತಿಸಿದರು, ಶ್ರೀಗೌರಿ ಕಾರ್ಯಕ್ರಮ ನಿರೂಪಿಸಿದರು, ವೇದಿಕಾ ಎಸ್ ದೊಡ್ಮನಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!