spot_img
Thursday, April 2, 2026
spot_img

ಹೆಸಕುತ್ತೂರು ಶಾಲೆಯಲ್ಲಿ ಯೋಗ ದಿನಾಚರಣೆ

ಕುಂದಾಪುರ: “ಯೋಗವು ನಮ್ಮ ದೇಹ ಹಾಗೂ ಮನಸ್ಸಿನ ಜೊತೆಗೆ ನಮ್ಮ ಬದುಕಿನ ಆರೋಗ್ಯವನ್ನು ಸದಾ ಸುಸ್ಥಿತಿಯಲ್ಲಿಡುವ ವಿಧಾನವಾಗಿದೆ” ಎಂದು ಉದ್ಯಮಿ ಸಂಕಯ್ಯ ಶೆಟ್ಟಿ ಸೈಬರಕಟ್ಟೆ ನುಡಿದರು.

ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಿಸಸ್ ಸಮದ್, ನೂಜಿ, ಕೊರ್ಗಿ ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಪಲ್ಲವಿ, ಶಾಲಾ ಶಿಕ್ಷಕರಾದ ಜಯಲಕ್ಷ್ಮಿ ಬಿ, ಜಯರಾಮ ಶೆಟ್ಟಿ, ವಿಜಯ ಶೆಟ್ಟಿ, ರವೀಂದ್ರ ನಾಯಕ್, ಗೌರವ ಶಿಕ್ಷಕಿ ಮಧುರಾ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ ಸ್ವಾಗತಿಸಿದರು. ಯೋಗ ಶಿಕ್ಷಕರಾದ ಎಂ ಸಂಜೀವ ಮೊಗವೀರ ಪ್ರಾಸ್ತಾವಿಕವಾಗಿ ಮಾತನಾಡಿ ಯೋಗ ತರಬೇತಿ ನೀಡಿದರು. ಸಹಶಿಕ್ಷಕಿ ವಿಜಯಾ ಆರ್ ವಂದಿಸಿದರು. ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!