spot_img
Thursday, April 2, 2026
spot_img

ಬೈಂದೂರಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಸೊಸೈಟಿಯಲ್ಲಿ ಮಾಜಿ ಶಾಸಕ, ಸಹಕಾರಿ ಧುರೀಣ ಜಿ.ಎಸ್ ಆಚಾರ್ ಪುಣ್ಯತಿಥಿ ಆಚರಣೆ

ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರು ಆಗಿದ್ದ ಜಿ.ಎಸ್. ಆಚಾರ್ ಪುಣ್ಯತಿಥಿ ಆಚರಣೆಯನ್ನು ಅವರು ನಿಧನರಾದ ದಿನವಾದ ಜೂನ್ 24ರಂದು ಬೈಂದೂರಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಸೊಸೈಟಿ ಇದರ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು.

ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರು, ಉಡುಪಿ ಜಿ.ಪಂ.ಮಾಜಿ ಅಧ್ಯಕ್ಷರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ರಾಜು ಪೂಜಾರಿ ಅವರು ದಿ.ಜಿ.ಎಸ್ ಆಚಾರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಸಹಕಾರ, ಸಾಮಾಜಿಕ, ರಾಜಕೀಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಜಿ.ಎಸ್ ಆಚಾರ್ ಅವರು ನಮ್ಮೊಡನೆ ಇಲ್ಲದಿದ್ದರೂ ಅವರ ಸಾಧನೆ ನೆನಪಿನಲ್ಲಿಡುವಂತಹದ್ದು. ಅನುಭವಿ ರಾಜಕಾರಣಿಯಾಗಿದ್ದ ಅವರು ಬೈಂದೂರು ಕ್ಷೇತ್ರದಲ್ಲಿ ನಾನು ಸೇರಿದಂತೆ ಹಲವಾರು ಯುವ ನಾಯಕರನ್ನು ಬೆಳೆಸಿದವರು. ಅವರ ಸ್ಪೂರ್ತಿ, ಮಾರ್ಗದರ್ಶನ ಅವರಿಂದ ಕಲಿತ ಎಲ್ಲಾ ನಾಯಕರಲ್ಲಿಯೂ ನೋಡಬಹುದಾಗಿದೆ. ಅವರು ಇಲ್ಲದಿದ್ದರೂ ಅವರ ಆದರ್ಶ ನಮ್ಮೊಡನೆ ಇದೆ. ಅವರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಗದೀಶ ಆಚಾರ್, ರವೀಂದ್ರ ಶ್ಯಾನುಭಾಗ್, ಮಂಜುನಾಥ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಸ್ಥೆಯ ಉಪಾಧ್ಯಕ್ಷರಾದ ಎಂ.ವಿನಾಯಕ ರಾವ್ ಸ್ವಾಗತಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿ, ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!