spot_img
Thursday, April 2, 2026
spot_img

ಗ್ಯಾಸ್ ಸಿಲಿಂಡರ್ ಲಾರಿ ಡಿಕ್ಕಿ : ಬೈಕ್ ಸಹಸವಾರ ಸಾವು

ಸಿದ್ಧಾಪುರ: ಸಿದ್ದಾಪುರ-ಹೊಸಂಗಡಿ ಮಾರ್ಗದಲ್ಲಿ ಜೂ.24 ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟದ್ದಾರೆ.

ದಿನಕರ ಎಂಬುವರು ತನ್ನ ಮೋಟಾರು ಸೈಕಲ್ ಸ್ನೇಹಿತ ಸೃಜನ್ ನಾಯ್ಕ (19)ಎಂಬುವನನ್ನು ಸಹಸವಾರನನ್ನಾಗಿ ಕುಳ್ಳಿರಿಸಿಕೊಂಡು ಹೊಸಂಗಡಿ ಸಿದ್ದಾಪುರ ಟಾರು ರಸ್ತೆಯಲ್ಲಿ, ಹೊಸಂಗಡಿ ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದಾಗ ಸಂಜೆ 5 ಗಂಟೆಯ ಸಮಯಕ್ಕೆ ಹೊಸಂಗಡಿ ಗ್ರಾಮದ ಕೆರೆಕಟ್ಟೆ ಅಬ್ಬಿಮಕ್ಕೆ ಎಂಬಲ್ಲಿ ತಲುಪುವಾಗ ಅವರ ಎದುರುನಿಂದ ಅಂದರೆ ಸಿದ್ದಾಪುರ ಕಡೆಯಿಂದ ಹೊಸಂಗಡಿ ಕಡೆಗೆ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿಯ ಚಾಲಕನು ಅತೀ ವೇಗ ಹಾಗೂ ಅಜಾಗೂರೂಕತೆಯಿಂದ ಚಲಾಯಿಸಿಕೊಂಡು ತೀರಾ ಬಲಭಾಗಕ್ಕೆ ಬಂದು ಮೋಟಾರು ಸೈಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಸಹ ಸವಾರ ಸೃಜನ್ ತಲೆಗೆ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ದಿನಕರ ಅವರ ಹಣೆಗೆ, ಬಲಕೈಗೆ, ಮೂಗು, ಎಡಕಾಲಿಗೆ ರಕ್ತಗಾಯವಾಗಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ಅತೀ ವೇಗ ಮತ್ತು ಅಜಾಗರರೂಕತೆಯ ಚಾಲನೆಯೇ ಕಾರಣವಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!