30.1 C
New York
Thursday, August 11, 2022

Buy now

spot_img

ಸ.ಹಿ.ಪ್ರಾ.ಶಾಲೆ ಆಲೂರು: ಎಂ.ಎಸ್ ಮಂಜ ಚಾರಿಟೇಬಲ್ ಟ್ರಸ್ಟ್‌ನಿಂದ ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪುರ: ಸ.ಹಿ.ಪ್ರಾ.ಶಾಲೆ ಆಲೂರು ಇಲ್ಲಿ ಎಂ.ಎಸ್ ಮಂಜ ಚಾರಿಟೇಬಲ್ ಟ್ರಸ್ಟ್ ಚಿತ್ತೂರು, ಮಾರಣಕಟ್ಟೆಯ ವತಿಯಿಂದ ಕೃಷ್ಣಮೂರ್ತಿ ಮಂಜರವರು ಶಾಲಾ ವಿದ್ಯಾರ್ಥಿಗಳಿಗೆ ನೀಡಿದ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮ ಹಾಗೂ ಜೂನ್ 30 ರಂದು ವಯೋನಿವೃತ್ತಿ ಹೊಂದಲಿರುವ ಶಿಕ್ಷಕ ಗಣಪತಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೃಷ್ಣಮೂರ್ತಿ ಮಂಜರವರು ನೋಟ್ ಪುಸ್ತಕಗಳನ್ನು ವಿತರಿಸಿ ಮುಂದೆಯೂ ಶಾಲೆಗೆ ಬೇಕಾದ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ನಿವೃತ್ತಿ ಹೊಂದಲಿರುವ ಶಿಕ್ಷಕ ಗಣಪತಿ ಅವರನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಲೂರು ಗ್ರಾ.ಪಂ.ಅಧ್ಯಕ್ಷೆ ಜಲಜ ಶೆಡ್ತಿ ಇವರು ವಹಿಸಿದ್ದರು. ಗ್ರಾ.ಪಂ.ಉಪಾಧ್ಯಕ್ಷರಾದ ರವಿ ಶೆಟ್ಟಿ, ಉದ್ಯಮಿಗಳಾದ ಕಳಿ ಚಂದ್ರಯ್ಯ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಿನಕರ ಶೆಟ್ಟಿ, ಆಲೂರು ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ನಾಗೇಶ್ ನಾಯ್ಕ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಚಂದ್ರಾವತಿ, ಪತ್ರಕರ್ತ ಪ್ರಭಾಕರ ಆಚಾರ್ಯ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಳಿ ಚಂದ್ರಯ್ಯ ಆಚಾರ್ಯ ಅವರು ಹೊಸದಾಗಿ ನಿರ್ಮಾಣಗೊಂಡ ಶಾಲಾ ಕೊಠಡಿಗೆ ಪೀಠೋಪಕರಣ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಶಶಿಧರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ವಿದ್ಯಾ ಸ್ವಾಗತಿಸಿದರು, ಶಿಕ್ಷಕ ವೀರೇಂದ್ರ ಜೋಗಿ ಕಾರ್ಯಕ್ರಮ ನಿರ್ವಹಿಸಿದರು, ಶಿಕ್ಷಕ ದಿನಕರ ದೇವಾಡಿಗ ವಂದಿಸಿದರು. ಶಿಕ್ಷಕಿಯರಾದ ಲೀನಾ ಕಾರ್ಡಿನ್, ಲಲಿತಾ, ದೀಪಾ ಕಾರ್ಯಕ್ರಮಕ್ಕೆ ಸಹಕರಿಸಿದರು. ಪ್ರೌಢಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,430FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!