spot_img
Thursday, May 7, 2026
spot_img

ಪಡುವಾಲ್ತೂರು ಶಾಲೆಗೆ ಸ್ವಚ್ಛ ವಿದ್ಯಾಲಯ ಸಮಗ್ರ ಪ್ರಶಸ್ತಿ

ಕುಂದಾಪುರ: ಜಿಲ್ಲಾಡಳಿತ, ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಉಡುಪಿ ಜಿಲ್ಲೆ ವತಿಯಿಂದ 2021-22ನೇ ಸಾಲಿನ ಸ್ವಚ್ಛ ವಿದ್ಯಾಲಯ ಪುರಸ್ಕಾರ ಜಿಲ್ಲಾಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜಿ.ಪಂ.ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆಯಿತು.

ಪಡುವಾಲ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶೇ.96 ಅಂಕಗಳೊಂದಿಗೆ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಸಮಗ್ರ ಪ್ರಶಸ್ತಿಯನ್ನು ಪಡೆದಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದೆ. ಶಾಲೆಯು ಜಿಲ್ಲಾಡಳಿತದಿಂದ ಸಮಗ್ರ ಪ್ರಶಸ್ತಿಯನ್ನು ಸ್ವೀಕರಿಸಿತು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕ ರಘುಪತಿ ಭಟ್, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಅಪರ ಜಿಲ್ಲಾಧಿಕಾರಿ ವೀಣಾ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಗೋವಿಂದ ಮಡಿವಾಳ ಮೊದಲಾದವರು ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!