spot_img
Thursday, May 7, 2026
spot_img

ಶಂಕರನಾರಾಯಣ: ಫಲಿತಾಂಶ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

ಶಂಕರನಾರಾಯಣ: ಮರು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಬಹುದೆಂಬ ಭಯದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ.

ಶಂಕರನಾರಾಯಣ ಒಡ್ಡನಬೇರು ಶ್ರೀ ವಿನಾಯಕ ನಿಲಯದ ಬಾಬಣ್ಣ ಕುಲಾಲರ ಪುತ್ರಿ ಮಾನಸ (17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮಾನಸ ಎಪ್ರಿಲ್ ತಿಂಗಳ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು ಮನೆಯಲ್ಲಿಯೇ ಇದ್ದು ಜೂನ್ ತಿಂಗಳ ಸಪ್ಲಿಮೆಂಟರಿ ಪರೀಕ್ಷೆ ಬರೆದಿದ್ದು ದಿನಾಂಕ 30/06/2022 ರಂದು ಪ್ರಥಮ ಪಿಯುಸಿಯ ಫಲಿತಾಂಶವಾಗಿದ್ದರಿಂದ ತಾನು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಬಹುದು ಎಂದು ಹೆದರಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ಸಮಯ ತನ್ನ ಮನೆಯ ಎದುರು ಇರುವ ಹುಲ್ಲು ಹಾಕುವ ಕೊಟ್ಟಿಗೆ ಮಾಡಿನ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!