spot_img
Thursday, April 2, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ.ಪೂ. ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ಸಾಧಕರಿಗೆ ಸನ್ಮಾನ

ಕೊಲ್ಲೂರು: ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ವತಿಯಿಂದ ೨೦೨೧-೨೨ ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಮತ್ತು ಈ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಗುರುವಾರ ನಡೆಯಿತು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಹಣಾಧಿಕಾರಿ ಎಸ್. ಪಿ. ಬಿ. ಮಹೇಶ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಡಾ. ಅತುಲ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಕಾಲೇಜಿನ ಪ್ರಾಂಶುಪಾಲ ಎಸ್. ಅರುಣ್ ಪ್ರಕಾಶ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಭಟ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರತ್ನ ರಮೇಶ್ ಕುಂದರ್, ಗೋಪಾಲಕೃಷ್ಣ ನಾಡ ಹಾಗೂ ವೇದಮೂರ್ತಿ ವಿದ್ವಾನ್ ಮಂಜುನಾಥ ಅಡಿಗ ಕರ್ಕಮುಡಿ, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವರ್ಗದವರು ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ೩೮ ವಿದ್ಯಾರ್ಥಿಗಳಿಗೆ ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ದ್ವಿತೀಯ ವಾಣಿಜ್ಯ ವಿಭಾಗ ವಿದ್ಯಾರ್ಥಿನಿ ಕೃಷ್ಣವೇಣಿ ಸ್ವಾಗತಿಸಿದರು, ದ್ವಿತೀಯ ವಾಣಿಜ್ಯ ವಿಭಾಗ ವಿದ್ಯಾರ್ಥಿನಿ ನಿಶ್ಮಿತಾ ಮತ್ತು ಜಯಶ್ರೀ ನಿರೂಪಿಸಿದರು, ದ್ವಿತೀಯ ಕಲಾ ವಿಭಾಗ ವಿದ್ಯಾರ್ಥಿ ಕೀರ್ತನ ಆರ್ ವಂದಿಸಿದರು. ತದನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!