spot_img
Thursday, April 2, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ರಚನೆಯನ್ನು ಮಾಡಿ ಪದಗ್ರಹಣ ಕಾರ್‍ಯಕ್ರಮವನ್ನು ಆಯೋಜಿಸಿದರು.

ಕಾರ್‍ಯಕ್ರಮದ ಮುಖ್ಯ ಅತಿಥಿಗಳಾಗಿ ಕೋಟ ಪೋಲಿಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಧು ಬಿ.ಯವರು ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಪದಗ್ರಹಣವನ್ನು ನೆರವೇರಿಸಿದರು. ವಿಧ್ಯಾರ್ಥಿ ನಾಯಕರನ್ನು ಅಭಿನಂದಿಸಿ ಉತ್ತಮ ನಾಯಕತ್ವವನ್ನು ನಡೆಸಲು ಶಿಸ್ತು ಪಾಲನೆ ಬಹುಮುಖ್ಯ ಅಂಶವೆಂದು ತಿಳಿಸಿದರು. ಪ್ರತಿಯೊಂದು ಸೋಲು ಗೆಲುವುಗಳಿಂದ ಪಾಠವನ್ನು ಕಲಿತು ಬದುಕನ್ನು ಮುನ್ನಡೆಸಿಕೊಂಡು ಹೋಗುವವನೇ ನಿಜವಾದ ನಾಯಕನಾಗಲು ಅರ್ಹ ಎಂದು ತಿಳಿಸಿದರು.

ಕಾರ್‍ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು , ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೆಡಾರವರು, ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿನಾಯಕಿಯಾಗಿ ಗಿಶಾ ಹಾಗೂ ಉಪನಾಯಕನಾಗಿ ಮಾಸ್ಟರ್ ವರ್ಷಿತ್ ಆಯ್ಕೆಯಾದರು. ವಿದ್ಯಾರ್ಥಿಗಳಾದ ಸನಾ ಸ್ವಾಗತಿಸಿದರು, ಸ್ಪಂದನಾ ನಿರೂಪಿಸಿದರು, ಹಂಸವಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!