spot_img
Monday, April 6, 2026
spot_img

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತ ತರಗತಿ ಆರಂಭ

ಗಂಗೊಳ್ಳಿ: ಸಂಸ್ಕೃತ ಭಾಷೆಯು ಅತ್ಯಂತ ಪ್ರಾಚೀನವಾದ ಭಾರತೀಯ ಭಾಷೆ, ಈ ಭಾಷೆಯನ್ನು ಕಲಿಯುವುದರಿಂದ ಭಾರತೀಯ ಸಂಸ್ಕೃತಿಯನ್ನು ಚೆನ್ನಾಗಿ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ, ಬಾಲ್ಯದಲ್ಲಿಯೇ ಹೆಚ್ಚು ಹೆಚ್ಚು ಭಾಷೆಗಳನ್ನು ಕಲಿಯುವುದು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಗಂಗೊಳಿ ಸರಸ್ವತಿ ವಿದ್ಯಾಲಯ ಸಂಸ್ಥೆಯು ತಮ್ಮ ಎಲ್ಲಾ ಶಾಲೆಗಳಲ್ಲಿ ಸಂಸ್ಕೃತವನ್ನು ಕಲಿಯಲು ನಿರಂತರವಾಗಿ ಪ್ರೋತ್ಸಾಹ ನೀಡುತ್ತಿದೆ. ಇದು ಎಲ್ಲರಿಗೂ ಅನುಸರಣೀಯವಾದ ಕಾರ್ಯವಾಗಿದೆ. ಇದರ ಪ್ರಯೋಜನವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳುವಂತಾಗಲಿ ಎಂದು ಕೋಟದ ವಿವೇಕ ಪ್ರೌಢಶಾಲೆಯ ಸಂಸ್ಕೃತ ಶಿಕ್ಷಕ ಶಂಭು ಭಟ್ ಅಭಿಪ್ರಾಯಪಟ್ಟರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲೆ ಇಲ್ಲಿ ನಡೆದ 6ಮತ್ತು 7ನೇ ತರಗತಿಗಳ ಸಂಸ್ಕೃತ ತರಗತಿಗಳ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ಕಾಮತ್ ವಿದ್ಯಾರ್ಥಿಗಳಿಗೆ ಸಂಸ್ಕೃತವನ್ನು ಕಲಿತು ಸಂಸ್ಕಾರವಂತರಾಗಿ ಸಂಸ್ಕೃತಿಯನ್ನು ಬೆಳೆಸಿರಿ ಎಂದು ಶುಭ ಹಾರೈಸಿದರು. ರಾಮನಾಥ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ವಿದ್ಯಾರ್ಥಿಗಳಿಗೆ ಸಂಸ್ಕೃತ ಪುಸ್ತಕಗಳ ವಿತರಣೆ ಮಾಡಲಾಯಿತು.

ಶಾಲೆಯ ಮುಖ್ಯ ಶಿಕ್ಷಕರಾದ ವಿಶ್ವನಾಥ್ ಭಟ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಸ್ವತಿ ವಿದ್ಯಾಲಯ ಪದವಿಯ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ವೆಂಕಟೇಶಮೂರ್ತಿ ಪ್ರಾಸ್ತಾವಿಕ ನುಡಿದರು, ಎಸ್ ವಿ ಪ್ರೌಢಶಾಲೆಯ ಸಂಸ್ಕೃತ ಶಿಕ್ಷಕ ಶ್ರೀಪತಿ ಭಟ್ ಉಪಸ್ಥಿತರಿದ್ದರು.

ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಸ್ಕೃತ ವಿದ್ಯಾರ್ಥಿನಿಯರಾದ ಸುಶ್ಮಿತಾ ಕಾರ್ಯಕ್ರಮ ಕಾರ್ಯಕ್ರಮ ನಿರ್ವಹಿಸಿ, ಮನಾಲೀ ಸ್ವಾಗತಿಸಿದರು, ದೈಹಿಕ ಶಿಕ್ಷಕ ನಾರಾಯಣ ಶೆಟ್ಟಿ ಸ್ವಾಗತಿಸಿದರು, ವೈಷ್ಣವಿ, ಗೌತಮಿ, ದೀಕ್ಷಾ ಮತ್ತು ಅರ್ಪಿತ ಪ್ರಾರ್ಥನೆ ಮಾಡಿದರು, ಮನಾಲೀ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!