Sunday, September 8, 2024

ಹಾಲಾಡಿ ಸರ್ವೋತ್ತಮ ಹೆಗ್ಡೆ ಅವರಿಂದ ರೂ.80ಸಾವಿರ ಮೌಲ್ಯದ ಸಮವಸ್ತ್ರ ಕೊಡುಗೆ

ಹಾಲಾಡಿ: ಮದುವೆ ವಾರ್ಷಿಕೋತ್ಸವ ಹಾಗೂ ಹುಟ್ಟುಹಬ್ಬಗಳ ಆಚರಣೆಗಳಿಗೆ ಹಣ ವ್ಯಯ ಮಾಡುದಕ್ಕಿಂತ ಆ ಹಣವನ್ನು ಸರಕಾರಿ ಶಾಲೆಗಳಿಗೆ ಮತ್ತು ಬಡಮಕ್ಕಳ ವಿದ್ಯಾಭ್ಯಾಸಗಳಿಗೆ ನೀಡಿದ್ದಾಗ, ಉತ್ತಮವಾದ ಸಮಾಜ ನೀಮಾರ್ಣವಾಗುತ್ತದೆ. ಸರಕಾರಿ ಶಾಲೆ ಹಾಗೂ ಕನ್ನಡ ಮಾಧ್ಯಮ ಶಾಲೆ ಉಳಿಸುವುದರಿಂದ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಉಳಿಯುತ್ತದೆ ಎಂದು ಹಾಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಚ್. ಸರ್ವೋತ್ತಮ ಹೆಗ್ಡೆ ಹಾಲಾಡಿ ಹೇಳಿದರು.

ಅವರು ಹಾಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ಮದುವೆ ವಾರ್ಷಿಕೋತ್ಸವದ ಪ್ರಯುಕ್ತ ಸುಮಾರು 80ಸಾವಿರ ರೂ.ಮೌಲ್ಯದ ಸಮವಸ್ತ್ರ ವಿತರಣೆ ಮತ್ತು ಗೀತಾ ಎಚ್.ಎಸ್.ಎನ್. ಫೌಂಡೇಶನ್ ಕೋಟೇಶ್ವರ ಅವರು ಕೊಡಮಾಡಿದ ಉಚಿತ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದರು.

ತಮ್ಮ 25ನೇ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸದೆ, ಅದರ ವ್ಯಯದ ಹಣವನ್ನು ಮಕ್ಕಳ ಸಮವಸ್ತ್ರಕ್ಕೆ ವಿನಿಯೋಗಿಸಿದ್ದೆನೆ. ಅಲ್ಲದೆ ಪ್ರತಿವರ್ಷ ಅತಿಥಿ ಶಿಕ್ಷಕರಿಗೆ ಸಂಬಳ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಹನದ ವ್ಯವಸ್ಥೆ ಮಾಡಿದ್ದು, ಅದರ ಸಂಪೂರ್ಣ ಬಾಡಿಗೆಯನ್ನು ನೀಡುತ್ತಿದ್ದೇನೆ ಎಂದು ಹೇಳಿದರು.

ಗೀತಾ ಎಚ್.ಎಸ್.ಎನ್. ಫೌಂಡೇಶನ್ ಕೋಟೇಶ್ವರ ಇದರ ಅಧ್ಯಕ್ಷ ಶಂಕರ ಐತಾಳ್ ಅಮಾಸೆಬಲು, ಹಾಲಾಡಿ ಗ್ರಾ.ಪಂ. ಉಪಾಧ್ಯಕ್ಷ ಜರ್ನಾದನ ಮೊಗವೀರ, ಎಸ್‌ಡಿ‌ಎಂಸಿ ಅಧ್ಯಕ್ಷ ರಾಘವೇಂದ್ರ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಮಂಜುನಾಥ ಕಾಮತ್, ಹಾಲಾಡಿ ಕ್ಲಸ್ಟರ್ ಸಿ‌ಆರ್‌ಪಿ ಅನುಪ್‌ಕುಮಾರ ಶೆಟ್ಟಿ, ಮುಖ್ಯ ಶಿಕ್ಷಕಿ ಲೀಲಾವತಿ, ಎಸ್‌ಡಿ‌ಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಮಕ್ಕಳು ಉಪಸ್ಥಿತರಿದ್ದರು.

ಶಿಕ್ಷಕಿ ಸಂಗೀತಾ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಲೀಲಾವತಿ ಪ್ರಾಸ್ತವಿಕವಾಗಿ ಮಾತನಾಡಿದರು. ಶಿಕ್ಷಕಿ ಅಕ್ಷತಾ ಸಹಕರಿಸಿದರು. ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಜಾತ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!