spot_img
Saturday, May 23, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸಿ‌ಎ, ಸಿ‌ಎಸ್ ಕೋರ್ಸ್‌ಗಳ ಮಾಹಿತಿ ಕಾರ್ಯಾಗಾರ

ಕುಂದಾಪುರ, ಜು.4: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿ‌ಎ/ ಸಿ‌ಎಸ್ ಕೋರ್ಸ್‌ಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ಪ್ರಸಿದ್ದ ಚಾರ್ಟೆಡ್ ಅಕೌಂಟೆಂಟ್ ಸಿ‌ಎ ಆದರ್ಶ ಶೆಣೈ ಇವರು ಕೋರ್ಸ್‌ಗಳ ಕುರಿತು ಮಾಹಿತಿ ನೀಡುತ್ತಾ ಸಿ‌ಎ ಕೋರ್ಸ್ ಕಠಿಣವಲ್ಲ, ವಿಭಿನ್ನ ಎನ್ನುವುದಕ್ಕೆ ಕೆಲವೊಂದು ಉದಾಹರಣೆಗಳನ್ನು ನೀಡಿ ವಿದ್ಯಾರ್ಥಿಗಳಲ್ಲಿ ಇರುವ ಅಂಜಿಕೆಯನ್ನು ತೊಲಗಿಸುವುದರ ಮೂಲಕ ಕಲಿಕೆಯಲ್ಲಿ ಆಸಕ್ತಿ ಇದ್ದರೆ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು.

ಸಂಸ್ಥೆಯ ಪ್ರಾಂಶುಪಾಲೆ ರಾಗಿಣಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಸುಶಾಂತ್ ನಾಯಕ್ ಅತಿಥಿಯನ್ನು ಪರಿಚಯಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಸವಿತಾ ರಮೇಶ್ ಸ್ವಾಗತಿಸಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕ ವಿಶ್ವೇಶ್ವರ ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!