spot_img
Saturday, April 4, 2026
spot_img

ಆನಗಳ್ಳಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ: 230 ಯೂನಿಟ್ ರಕ್ತ ಸಂಗ್ರಹ

ಕುಂದಾಪುರ: ದತ್ತಾಶ್ರಮ ಆದಿಶಕ್ತಿ ಮಠ, ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ ಆನಗಳ್ಳಿ, ರಿಜಾಯ್ಸ್ ಇಂವೆನ್ಟ್ ಗ್ರೂಪ್ ಆನಗಳ್ಳಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಕ್ತನಿಧಿ ವಿಭಾಗ ಕೆ‌ಎಂಸಿ ಮಣಿಪಾಲ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಕಾರದಲ್ಲಿ ಗೆಳೆಯರ ಬಳಗ ಕಲಾಮಂದಿರ ಆನಗಳ್ಳಿ ಕುಂದಾಪುರ ಇಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು, ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ದಾನ ಎಲ್ಲವು ಶ್ರೇಷ್ಠ ದಾನ. ನಾವು ಕೊಟ್ಟ ರಕ್ತ ಯಾರಿಗೆ ಯಾವ ಧರ್ಮದ ರೋಗಿಗೆ ಕೊಡಲಾಗುತ್ತದೆ ಎಂದು ತಿಳಿಯದು. ಹಾಗೇಯೇ ರಕ್ತವನ್ನು ಪಡೆದ ರೋಗಿಗೂ ಯಾರ ರಕ್ತ ಹಾಗೂ ಯಾವ ಧರ್ಮದವರ ರಕ್ತ ಎಂದು ಗೊತ್ತಿರುವುದಿಲ್ಲ. ಹಾಗಾಗಿ ದಾನಗಳಲ್ಲಿ ರಕ್ತದಾನ ಸರ್ವ ಶ್ರೇಷ್ಠ ದಾನಗಳಲ್ಲಿ ಒಂದು ಎಂದು ಅಭಿಪ್ರಾಯಪಟ್ಟರು.

ದತ್ರಾಶ್ರಮ ಆದಿಶಕ್ತಿ ಮಠ ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ ಇದರ ಫೆರ್ಮಿನಾ ಸುಭಾಷ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸಭಾಪತಿ ಕುಂದಾಪುರ ಜಯಕರ್ ಶೆಟ್ಟಿ, ಕುಂದಾಪುರ ಆದರ್ಶ ಆಸ್ಪತ್ರೆಯ ಡಾ ಆದರ್ಶ್ ಹೆಬ್ಬಾರ್, ಎಚ್‌ಡಿ‌ಎಫ್‌ಸಿ ಬ್ಯಾಂಕ್ ಮಂಗಳೂರು ಇದರ ಪ್ರಬಂಧಕರಾದ ಮನೋಜ್ ಪುತ್ರನ್, ತಾ.ಪಂ. ಮಾಜಿ ಅಧ್ಯಕ್ಷ ಭಾಸ್ಕರ್ ಬಿಲ್ಲವ, ಕೆ‌ಎಂಸಿ ಮಣಿಪಾಲ ರಕ್ತನಿಧಿ ವಿಭಾಗದ ವೈದ್ಯ ಡಾ.ಮಹಮ್ಮದ್ ಆಜೀಜ್, ಆನಗಳ್ಳಿ ಗೆಳೆಯರ ಬಳಗದ ಅಧ್ಯಕ್ಷ ಉಮೇಶ್ ಕಾಂಚನ್, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್ ಮಣಿಪಾಲ್, ಅಧ್ಯಕ್ಷರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಕ್ತದಾನ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಡಾ. ಸೋನಿಯ, ಪ್ರಶಾಂತ್ ತಲ್ಲೂರು, ಸುಕೇಶ್ ಖಾರ್ವಿ, ರಾಘವೇಂದ್ರ, ಸುಜಯ ಇವರನ್ನು ಸನ್ಮಾನಿಸಲಾಯಿತು.

ಗಣೇಶ್ ಕಾಂಚನ್ ಸ್ವಾಗತಿಸಿದರು. ನಾಗರಾಜ್ ಭಟ್ಕಳ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ವಂದಿಸಿದರು.
ಶರತ್ ಕಾಂಚನ್ ನೇತೃತ್ವದಲ್ಲಿ ನಡೆದ ಈ ರಕ್ತದಾನ ಶಿಬಿರದಲ್ಲಿ 230 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!