spot_img
Saturday, April 4, 2026
spot_img

ಬೋರ್ಡ್ ಹೈಸ್ಕೂಲ್ ಕುಂದಾಪುರ: ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ

ಕುಂದಾಪುರ: ಪ್ರತಿಭೆ ಎಲ್ಲರಲ್ಲೂ ಇರುತ್ತದೆ ಆದರೆ ಸೂಕ್ತ ಆವಕಾಶದ ಸದ್ಭಳಕೆಯಿಂದ ನಾವು ಇಂತಹ ಸಾಧನೆ ಮಾಡಿ ಪುರಸ್ಕಾರಕ್ಕೆ ಪಾತ್ರರಾಗುತ್ತೇವೆ ಎಂದು ಕುಂದಾಪುರ ಪುರಸಭೆ ಸದಸ್ಯ ಮೋಹನ್‌ದಾಸ್ ಶೆಣೈ ಹೇಳಿದರು.

ಅವರು ಸರಕಾರಿ ಪದವಿ ಪೂರ್ವಕಾಲೇಜು (ಬೋರ್ಡ್ ಹೈಸ್ಕೂಲ್) ಕುಂದಾಪುರ ಇಲ್ಲಿನ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸುಮಾರು 49 ವಿದ್ಯಾರ್ಥಿಗಳ ಪುರಸ್ಕಾರ ಮತ್ತು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸತೀಶ ಖಾರ್ವಿ ಮಾತನಾಡಿ ಕುಂದಾಪುರ ವಲಯದಲ್ಲೇ ಅತ್ಯಧಿಕ ವಿಧ್ಯಾರ್ಥಿಗಳನ್ನು ಹೊಂದಿರುವ ಸರಕಾರಿ ವಿದ್ಯಾ ಸಂಸ್ಥೆ ನಮ್ಮದಾಗಿದ್ದು ಪೋಷಕರು ಮತ್ತು ವಿದ್ಯಾರ್ಥಿಗಳ ವಿಶ್ವಾಸಕ್ಕೆ ಕೊರತೆಯಾಗದ ಪಲಿತಾಂಶತರುವಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗ ಪರಿಶ್ರಮ ಈ ಪುರಸ್ಕಾರಕ್ಕೆ ಸಾಕ್ಷಿ ಎಂದರು

ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿಭಾಗದಲ್ಲಿ ಶಾಲೆಗೆ ಪ್ರಥಮ ಸ್ಥಾನಿಯಾದ ರಕ್ಷಿತಾ ಮತ್ತು ಶ್ರೇಯಸ್ ಅವರನ್ನು ಪೋಷಕರೊಂದಿಗೆ ವಿಶೇಷವಾಗಿ ಸನ್ಮಾನಿಸಲಾಯಿತು ಸಾಧಕ ವಿದ್ಯಾರ್ಥಿಗಳಾದ ಭೂಮಿಕಾ ಸೌಜನ್ಯ ಶ್ರೇಯಸ್ ತಮ್ಮ ಈ ಸಾಧನೆಗೆ ಕಳೆದ ಸಾಲಿನ ವಿದ್ಯಾರ್ಥಿಗಳ ಪ್ರೇರಣೆ ಮತ್ತು ಅಧ್ಯಾಪಕರ ಶ್ರಮವನ್ನು ಸ್ಮರಿಸಿದರು

ಸಂಸ್ಥೆಯ ಪ್ರಭಾರ ಉಪಪ್ರಾಂಶುಪಾಲರಾದ ವಿನುತಾ ಗಾಂವ್‌ಕರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಶಿಕ್ಷಕ ಶಂಕರನಾರಾಯಣ ಮಿತ್ಯಂತಾಯ ಸಾಧಕರ ಪಟ್ಟಿ ವಾಚಿಸಿದರು. ಶಿಕ್ಷಕ ಪ್ರದೀಪಕುಮಾರ ಶೆಟ್ಟಿ ಸ್ವಾಗತಿಸಿದರು. ಗಣೇಶ ಕಾಂಚನ್ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಮಡಿವಾಳ ಎಂ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!