Sunday, September 8, 2024

ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ

ಬೈಂದೂರು: ಕಳೆದ ಹಲವು ದಿನಗಳಿಂದ ಕಡಲ್ಕೊರೆತ ಎದುರಿಸುತ್ತಿರುವ ಮರವಂತೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲಿಸಿ ತುರ್ತು ಪರಿಹಾರ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಸ್ಥಳೀಯರು ನಿರಂತರವಾಗಿ ಕಡಲ್ಕೊರೆತವನ್ನು ಎದುರಿಸುತ್ತಿದ್ದರೂ ತುರ್ತು ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಮುಂದಾಗಿಲ್ಲ. ಹೀಗೆ ಮುಂದುವರಿದರೆ ರಸ್ತೆಯೂ ಸಮುದ್ರ ಪಾಲಾಗಲಿದೆ. ನಮಗೆ ಶಾಶ್ವತ ಪರಿಹಾರ ಒದಗಿಸಿಕೊಡಿ ಎಂದು ಆಗ್ರಹಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು ಬಂದರುಗಳ ಅಭಿವೃದ್ದಿಗೆ 84 ಕೋಟಿ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ಶೀಘ್ರದಲ್ಲಿ ಆರಂಭವಾಗಲಿದೆ. ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಅನುದಾನದ ಕೊರತೆಯನ್ನು ಇಲಾಖೆಗಳು ಎದುರಿಸುತ್ತಿವೆ. ಕಡಲ್ಕೊರೆತಕ್ಕೆ ಕಲ್ಲಿನಿಂದ ತಡೆಗೋಡೆ ನಿರ್ಮಿಸಿದರೆ ಸಮಸ್ಯೆ ಪರಿಹಾರ ಆಗುವುದಿಲ್ಲ. ಹಾಗಾಗಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಂಸತ್ತಿನ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಲಾಗುವುದು. ಶಾಸಕರ ಜೊತೆಗೂಡಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಜನರ ಸಮಸ್ಯೆಯ ಪರಿಹಾರಕ್ಕೆ ಮನವಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮ ರಾವ್, ಸಿ‌ಇ‌ಓ ಪ್ರಸನ್ನ ಎಚ್ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!