Thursday, November 21, 2024

ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಮಸ್ಯೆಗಳನ್ನು 10 ದಿನದ ಒಳಗೆ ಸರಿಪಡಿಸಿ- ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ:ಜಿಲ್ಲೆಯಲ್ಲಿ ಹಾದುಹೋಗಿರುವರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169 ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ‌ಅಡಚಣೆಯಾಗಿರುವ‌ ಎಲ್ಲಾ ರಸ್ತೆ ಮೂಲಭೂತ ಸಮಸ್ಯೆಗಳನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ‌ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅವರು‌ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ನಡೆದ ಸಭೆಯ‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಡಳಿತ ಸೂಚಿಸುವ ಸಭೆಗಳಿಗೆ, ಜಿಲ್ಲಾ‌ ಉಸ್ತುವಾರಿ ಸಚಿವರ ಸಭೆಗಳಿಗೂ ಸಹ ಗೈರು ಹಾಜರಾಗುತ್ತಿರುವ ಬಗ್ಗೆ ತೀವ್ರ‌ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮತ್ತು‌ ಇತರೆ ಕಾರ್ಯಗಳನ್ನು ಸುಗಮವಾಗಿ ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ, ಜಿಲ್ಲಾಡಳಿತ ನೀಡುವ‌ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿಪಾಲಿಸಬೇಕು ಮತ್ತು ಪ್ರಸ್ತುತರಾಷ್ಟ್ರೀಯ ಹೆದ್ದಾರಿಯಲ್ಲಿಕಂಡು ಬರುತ್ತಿರುವ ಸಮಸ್ಯೆಗಳ ಕುರಿತು ನೀಡಿರುವ‌ಎಲ್ಲಾ ಸಮಸ್ಯೆಗಳನ್ನು ೧೦ ದಿನದ ಒಳಗೆ ಸಂಪೂರ್ಣವಾಗಿಬಗೆ ಹರಿಸಿ, ಈ ಸಮಸ್ಯೆಗಳನ್ನು ಸರಿಪಡಿಸಿದ ದಿನಾಂಕ ಮತ್ತು ಸಮಯವನ್ನು ಒಳಗೊಂಡ ಕುರಿತು ಛಾಯಾಚಿತ್ರಗಳು ಹಾಗೂ ವರದಿಯನ್ನು ಸಲ್ಲಿಸಿ, ಮುಂದಿನ ಸಭೆಗೆ ಹಾಗೂ ಜಿಲ್ಲಾಡಳಿತ ಸೂಚಿಸುವ‌ ಎಲ್ಲಾ ಸಭೆಗಳಿಗೆ ಕಡ್ಡಾಯವಾಗಿ ಹಾಜರಿರುವಂತೆ‌ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ತೊಂದರೆ‌ಇರುವ ಅಡೆತಡೆಗಳನ್ನು ತಕ್ಷಣವೇ ಸರಿಪಡಿಸಬೇಕು.ತುರ್ತು ಅಗತ್ಯವಿರುವೆಡೆಗಳಲ್ಲಿ ತಕ್ಷಣವೇ ಬೀದಿದೀಪಗಳನ್ನು ಅಳವಡಿಸಬೇಕು. ಹೆದ್ದಾರಿ ಪಕ್ಕದಲ್ಲಿ ನೀರು ಹರಿಸಲು ಮತ್ತು ಸಂಚಾರಕ್ಕೆತಡೆ‌ಉಂಟು ಮಾಡುವ ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು. ಪ್ಲೈ ಓವರ್‌ಗಳ ಮೇಲೆ ನೀರು ನಿಲ್ಲದಂತೆ‌ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಹೆದ್ದಾರಿಯಲ್ಲಿ‌ ಅವೈಜ್ಞಾನಿಕ ಕಾಮಗಾರಿಯ ಕಾರಣ ಅಪಘಾತಗಳು ಸಂಭವಿಸಿ, ಸಾವು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಹೆದ್ದಾರಿಯ ಅಧಿಕಾರಿಗಳ ಮೇಲೆ ಕೇಸು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ದಾಖಲಿಸಿ ಅವುಗಳಿಗೆ ಕಾಲಮಿತಿಯಲ್ಲಿ ಪರಿಹಾರ‌ ಒದಗಿಸಬೇಕು. ಇದಕ್ಕಾಗಿದೂರು ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಅದರಲ್ಲಿ ದೂರುಗಳಿಗೆ ಸಂಬಂಧಪಟ್ಟ‌ಎಲ್ಲಾ ವಿವರಗಳನ್ನು ದಾಖಲಿಸಬೇಕು.ನಿಗಧಿತ ಅವಧಿಯೊಳಗೆ ಸಮಸ್ಯೆಗಳನ್ನು ಬಗೆಹರಿಸದ ಸಿಬ್ಬಂದಿಗಳ ವೇತನ ಮತ್ತು ಭತ್ಯೆಗಳನ್ನು ತಡೆ ಹಿಡಿಯುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಹೆದ್ದಾರಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಜಿಲ್ಲಾಡಳಿತ ಸೂಚಿಸುವ ಕಾಲಮಿತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು. ಕುಂದಾಪುರದ ಸಂಗಂ ಜಂಕ್ಷನ್‌ನಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ನೀರು ಹರಿದುಹೋಗಲು ವ್ಯವಸ್ಥೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಬೀದಿದೀಪದ ವ್ಯವಸ್ಥೆ ಮಾಡಬೇಕು.ಸಾಲಿಗ್ರಾಮ ಬಳಿಯ ಸರ್ವಿಸ್‌ರಸ್ತೆಕಾಮಗಾರಿ ಸೇರಿದಂತೆ ಬಾಕಿ ಇರುವ‌ಎಲ್ಲಾ‌ಅಪೂರ್ಣ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು.ಮಳೆ ನಿಂತಕೂಡಲೇರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ‌ಎಲ್ಲಾ ರಸ್ತೆಗಳ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಈಗಾಗಲೇ ಕೈಗೊಂಡಿರುವಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗಳಿಗೆ ರೈಲ್ವೆ ಮತ್ತುರಾಷ್ಟ್ರೀಯ ಹೆದ್ದಾರಿ ಇಲಾಖೆಗಳಿಂದ ಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಎ‌ಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ನವಯುಗ ಮತ್ತು‌ ಐ‌ಆರ್‌ಬಿಯ‌ ಇಂಜನಿಯರ್ ಗಳು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!