spot_img
Monday, March 23, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಎಸ್.ಎಸ್.ಎಲ್.ಸಿ. ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2020, 2021, 2022ರ ಎಸ್.ಎಸ್.ಎಲ್.ಸಿಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಸಂಸ್ಥೆಯ ಕಾರ್ಯದರ್ಶಿ ಕೆ.ರಾಧಾಕಷ್ಣ ಶೆಣೈಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ ಕುಮಾರ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಪ್ರತಿ ಸಾಲಿನಲ್ಲಿ ಶಾಲೆಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರಿಗೆ ಬೆಳ್ಳಿ ಲೋಟ ಹಾಗೂ ಬೆಳ್ಳಿ ನಾಣ್ಯವನ್ನು ನೀಡಿ ಸನ್ಮಾನಿಸಲಾಯಿತು. 600 ಕ್ಕಿಂತ ಅಧಿಕ ಅಂಕ ಗಳಿಸಿದವರಿಗೆ 8 ಗ್ರಾಂ ನ ಬೆಳ್ಳಿಯ ನಾಣ್ಯವನ್ನು, ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ 6 ಗ್ರಾಂ ನ ಬೆಳ್ಳಿಯ ನಾಣ್ಯವನ್ನು ನೆನೆಪಿನ ಕಾಣಿಕೆಯಾಗಿ ನೀಡಲಾಯಿತು.

ಈ ಸಮಾರಂಭದಲ್ಲಿ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ ಹಾಗೂ ಕೆ.ಜಿ. ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ ಸ್ವಾಗತಿಸಿ, ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ ಶ್ಯಾನುಭೋಗ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!