spot_img
Sunday, April 5, 2026
spot_img

ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿ‌ಎ ಪರೀಕ್ಷೆ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ: ಸಿ‌ಎ /ಸಿ‌ಎಸ್ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಅನೇಕ ರಾಷ್ಟ್ರೀಯ ಮಟ್ಟದ ರ್‍ಯಾಂಕ್‌ಗಳನ್ನು ಪಡೆದ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಕುಂದಾಪುರ. ಸಿ‌ಎ ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ತನ್ನ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಜುಲೈ 15ರಂದು ಕುಂದೇಶ್ವರ ರಸ್ತೆಯ ಸಂಸ್ಥೆಯ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿತು.

ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ 2022 ರಲ್ಲಿ ನಡೆಸಿದ ಸಿ‌ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಂಸ್ಥೆಯ ವಿದ್ಯಾರ್ಥಿಗಳಾದ ಸಿ‌ಎ ಪ್ರಕಾಶ್ ಶೆಟ್ಟಿ ಮತ್ತುವಿನಾರ್ಡ್ ಅವರನ್ನು ಅಭಿನಂದಿಸಲಾಯಿತು

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಿ‌ಎ ಪ್ರಕಾಶ್ ಶೆಟ್ಟಿ, ಕಠಿಣ ಪರಿಶ್ರಮ,ಗುರುಗಳ ಮಾರ್ಗದರ್ಶನ,ಸಾಮಾಜಿಕ ಜಾಲತಾಣಗಳಿಂದ ದೂರವಿದ್ದರೆ ಸಿ‌ಎ ಪರೀಕ್ಷೆಗಳನ್ನು ವಿದ್ಯಾರ್ಥಿಗಳುಯಾವುದೇ ಆತಂಕವಿಲ್ಲದೆ ಪೂರ್ಣಗೊಳಿಸಬಹುದು ಎಂದರು.
ನಾನು ಎಸ್‌ಎಸ್‌ಎಲ್ ಸಿ ಅಲ್ಲಿ ಕೇವಲ 70% ಅಂಕ ಮತ್ತು ಪಿಯುಸಿಯಲ್ಲಿ ೮೦% ಅಂಕ ಪಡೆದ ಒಬ್ಬ ಸಾಮಾನ್ಯ ವಿದ್ಯಾರ್ಥಿ. ನಾನು ಇಂದು ಸಿ‌ಎ ಪೂರ್ಣಗೊಳಿಸಿದ್ದೇನೆ ಎಂದರೆ ಕಠಿಣ ಪರಿಶ್ರಮ, ತ್ಯಾಗಮನೋಭಾವ ಇರುವ ಯಾವುದೇ ವಿದ್ಯಾರ್ಥಿಗಳು ಲೆಕ್ಕ ಪರಿಶೋಧಕರಾಗಿ ಹೊರಹೊಮ್ಮಬಹುದು ಎಂದರು.

ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಅವರು ಮಾತನಾಡುತ್ತಾ ತಮ್ಮ ವಿದ್ಯಾರ್ಥಿಗಳ ಸಾಧನೆ ಹೆಮ್ಮೆ ತರುವಂತದ್ದು. ಇಂತಹ ಸಾಧಕ ವಿದ್ಯಾರ್ಥಿಗಳು ಸಿ‌ಎ/ ಸಿ‌ಎಸ್ ಪರೀಕ್ಷೆ ಎದುರಿಸುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಿಜವಾದ ಸ್ಪೂರ್ತಿ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಪ್ರಭ ಅಕಾಡೆಮಿಯ ಇನ್ನೂರಕ್ಕು ಹೆಚ್ಚು ಸಿ‌ಎ/ಸಿ‌ಎಸ್ ಕೋರ್ಸುಗಳ ವಿವಿಧ ಹಂತದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಅಂಕಿತ ವಿ ಶೆಟ್ಟಿ ಸ್ವಾಗತಿಸಿ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!