spot_img
Monday, June 22, 2026
spot_img

ತಾಲ್ಲೂಕು ಮಟ್ಟದ ಚೆಸ್ ಪಂದ್ಯಾಟ: ಎಕ್ಸಲೆಂಟ್ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಆಯೋಜಿಸಿದ ತಾಲ್ಲೂಕು ಮಟ್ಟದ ಚೆಸ್ ಪಂದ್ಯಾಟವು ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ತಾಲ್ಲೂಕು ಮತ್ತು ಕುಂದಾಪುರ ಎಜುಕೇಶನ್ ಸೊಸೈಟಿ ಪವರ್ತಿತ ಹೆಚ್ ಎಂ ಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆ ಕುಂದಾಪುರ, ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಚೆಸ್ ಪಂದ್ಯಾಟ ಇತ್ತೀಚಿಗೆ ನಡೆಯಿತು.

ಎಕ್ಸಲೆಂಟ್ ಪಿಯು ಕಾಲೇಜು ಮತ್ತು ಪ್ರೌಢಶಾಲೆಯ ಮೂರು ವಿದ್ಯಾರ್ಥಿಗಳು ಕ್ರೀಡಾ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು, 9ನೇ ತರಗತಿಯ ತತ್ವ ಶೆಟ್ಟಿ ಪ್ರಥಮ ಸ್ಥಾನಿಯಾಗಿ, 9ನೇ ತರಗತಿಯ ಶಾಧನಾ ದೇವಾಡಿಗ ಐದನೇ ಸ್ಥಾನಿಯಾಗಿ ಮತ್ತು ಪ್ರಾಥಮಿಕ ವಿಭಾಗದ 7ನೇ ತರಗತಿಯ ಪ್ರಕೃತಿ ಪಿ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇದರ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಖಜಾಂಚಿಯವರಾದ ಭರತ್ ಶೆಟ್ಟಿ ಅಭಿನಂದಿಸಿದ್ದಾರೆ. ಶಾಲಾ ದೈಹಿಕ ಶಿಕ್ಷಣ ನಿರ್ದೇಶಕರಾದ ಜಯಲತಾ ಮತ್ತು ಸತೀಶ್ ಕುಮಾರ್ ಮಾರ್ಗದರ್ಶನ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!