spot_img
Wednesday, January 22, 2025
spot_img

ಗಂಗೊಳ್ಳಿಯಲ್ಲಿ ರೂ. 100 ಕೋಟಿ ವೆಚ್ಚದ ಕೋಸ್ಟಲ್ ಬರ್ತ್ ನಿರ್ಮಾಣ-ಬಿ.ವೈ.ರಾಘವೇಂದ್ರ

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿಯಲ್ಲಿ ಸುಮಾರು ರೂ. 100 ಕೋಟಿ ವೆಚ್ಚದಲ್ಲಿ ಕೋಸ್ಟಲ್ ಬರ್ತ್ ನಿರ್ಮಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವರಾದ ಸರ್ಬಾನಂದ ಸೋನೋವಾಲ ಅವರು ಸಮ್ಮತಿಸಿದ್ದಾರೆ. ಕೋಸ್ಟಲ್ ಬರ್ತ್ ನಿರ್ಮಾಣದಿಂದ ಮತ್ಸೋದ್ಯಮಕ್ಕೆ ಪೂರಕ ವಾತಾವರಣ ಸಿಗಲಿದೆ. ಸಾಗರಮಾಲ ಯೋಜನೆಯಲ್ಲಿ ಬಂದರು ಸಂಪರ್ಕ ಕೂಡ ಆಗಲಿದ್ದು, ಮುಂದಿನ ದಿನಗಳಲ್ಲಿ ಗಂಗೊಳ್ಳಿ ಒಂದು ಅತ್ಯುತ್ತಮ ವಾಣಿಜ್ಯ ಕೇಂದ್ರವಾಗಿ ಹೊರ ಹೊಮ್ಮಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಣ್ಣ ಕೈಗಾರಿಕೋದ್ಯಮಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತ ಇವರ ವತಿಯಿಂದ ಕೈಗಾರಿಕಾ ವಸಾಹತು ನಿರ್ಮಿಸಲು ಉಡುಪಿ ಜಿಲ್ಲಾಡಳಿತಕ್ಕೆ ಸ್ಥಳ ಗುರುತು ಮಾಡಲು ವಿನಂತಿಸಲಾಗಿತ್ತು. ಅದರಂತೆ ಸುಮಾರು 19 ಎಕ್ರೆ ಸ್ಥಳವನ್ನು ಗುರುತಿಸಿ ಕೈಗಾರಿಕಾ ವಸಾಹತು ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ.
ಇವುಗಳಿಂದ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗ ಸೃಷ್ಠಿಯಾಗಲಿದೆ. ಈ ಯೋಜನೆಗಳಿಗೆ ಸಹಕರಿಸಿದ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸಂಸದ ಬಿ. ವೈ. ರಾಘವೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!