spot_img
Monday, April 6, 2026
spot_img

ಹಿರಿಯ ಕಲಾವಿದ ಆಲೂರು ಸುರೇಂದ್ರ ಅವರಿಗೆ ಎಂ.ಎಂ.ಹೆಗ್ಡೆ ಪ್ರಶಸ್ತಿ ಪ್ರದಾನ

ಕುಂದಾಪುರ: ಉಡುಪಿಯ ರಂಗಸ್ಥಳ ಸಾಂಸ್ಕೃತಿಕ ಸೇವಾ ಮತ್ತು ಸಂಶೋಧನ ಟ್ರಸ್ಟ್ ಇವರ ಸಹಯೋಗದಲ್ಲಿ ಎಂ.ಎಂ ಹೆಗ್ಡೆ ಪ್ರತಿಷ್ಠಾನ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಎಂ.ಎಂ.ಹೆಗ್ಡೆ ಸಂಸ್ಮರಣಾ ಪ್ರಶಸ್ತಿ-2022ನ್ನು ಬಡಗುತಿಟ್ಟಿನ ಹಿರಿಯ ಪುರುಷವೇಷಧಾರಿ ಆಲೂರು ಸುರೇಂದ್ರ ಅವರಿಗೆ ಪ್ರದಾನ ಮಾಡಲಾಯಿತು.

ಯಕ್ಷರಂಗದ ಭೀಷ್ಮ, ಕುಂದಾಪುರದ ಹಿರಿಯ ವಕೀಲ ಎಂ.ಎಂ.ಹೆಗ್ಡೆ ಅವರ ನೆನಪಿನಲ್ಲಿ ಪ್ರತೀ ವರ್ಷ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಾಲಿನ ಪ್ರಶಸ್ತಿಯನ್ನು ಹಿರಿಯ ಕಲಾವಿದ, ಎಂ.ಎಂ ಹೆಗ್ಡೆಯವರ ಯಜಮಾನಿಕೆಯ ಮೇಳದಲ್ಲಿ ಸುದೀರ್ಘ ಕಾಲ ತಿರುಗಾಟ ಮಾಡಿದ ಆಲೂರು ಸುರೇಂದ್ರ ಅವರಿಗೆ ನಗದು, ಪ್ರಶಸ್ತಿಪತ್ರ, ಫಲಪುಷ್ಪಗಳನ್ನಿತ್ತು ಆಲೂರಿಲ್ಲಿರುವ ಸುರೇಂದ್ರ ಅವರ ಮನೆಯಲ್ಲಿ ಗೌರವಿಸಲಾಯಿತು.

ರಂಗಸ್ಥಳದ ಅಧ್ಯಕ್ಷ ಪಿ.ಕಿಶನ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಗೌರವ ಅಧ್ಯಕ್ಷ ಸಾಯಿರಾಧ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಮನೋಹರ ಶೆಟ್ಟಿ, ಎಂ.ಎಂ.ಹೆಗ್ಡೆ ಪ್ರತಿಷ್ಠಾನದ ಅಧ್ಯಕ್ಷ ವೈ.ಸೀತಾರಾಮ ಶೆಟ್ಟಿ, ಯಕ್ಷಗಾನ ವಿಮರ್ಶಕ ಪ್ರೊ.ಎಸ್.ವಿ ಉದಯ ಕುಮಾರ್ ಶೆಟ್ಟಿ, ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಲಜಾಕ್ಷಿ ಶೆಟ್ಟಿ, ಆಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ, ರಘುರಾಮ ದೇವಾಡಿಗ, ಕುಶಲ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಶಸ್ತಿ ಪುರಸ್ಕೃತ ಕಲಾವಿದ ಆಲೂರು ಸುರೇಂದ್ರ ಕೃತಜ್ಞತೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!