spot_img
Wednesday, January 22, 2025
spot_img

ಬೈಂದೂರು ಕ್ಷೇತ್ರದಲ್ಲಿ ಬಹುಪಯೋಗಿ ಬಂದರು, ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಸಂಸದ ಬಿ.ವೈ ರಾಘವೇಂದ್ರ ಮನವಿ

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಾಗರಮಾಲಾ ಯೋಜನೆಯಲ್ಲಿ ಬಹು‌ಉಪಯೋಗಿ ಬಂದರು ಹಾಗೂ ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣದ ಬಗ್ಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದರಾದ ಬಿ.ವೈ ರಾಘವೇಂದ್ರ ಅವರು ಜು.25ರಂದು ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವರಾದ ಸರ್ಬಾನಂದ ಸೋನಾವಾಲ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಮೀನುಗಾರಿಕೆ, ಪ್ರವಾಸೋದ್ಯಮ, ವಾಣಿಜ್ಯ ಹಾಗೂ ಆರ್ಥಿಕ ಅಭಿವೃದ್ದಿಗೆ ಪೂರಕ ಅವಕಾಶಗಳಿದ್ದು ಇಲ್ಲಿ ಮಲ್ಟಿ ಪರ್ಪಸ್ ಹಾರ್ಬರ್ (ಬಹು ಉಪಯೋಗಿ ಬಂದರು) ಸ್ಥಾಪನೆ ಮಾಡಲು ಕ್ರಮ ವಹಿಸಬೇಕು ಎಂದು ಸಂಸದರು ಒತ್ತಾಯಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ವ್ಯಾಪ್ತಿಯ ಗಂಗೊಳ್ಳಿಯಿಂದ ಕುಂದಾಪುರಕ್ಕೆ ಬರಲು ಸುಮಾರು 18 ಕಿ.ಮೀ ಸುತ್ತಿ ಬಳಸಿ ಬರಬೇಕಾಗಿದೆ. ಗಂಗೊಳ್ಳಿ ಮೀನುಗಾರಿಕಾ ಬಂದರು ಮತ್ತು ವಾಣಿಜ್ಯ ಕೇಂದ್ರವಾದ ಕುಂದಾಪುರ ಸಂಪರ್ಕಿಸಲು ಸೇತುವೆ ನಿರ್ಮಿಸಿದ್ದಲ್ಲಿ ಗಂಗೊಳ್ಳಿಯಿಂದ ಕುಂದಾಪುರ ಬಹಳ ಹತ್ತಿರವಾಗಲಿದೆ. ಕಛೇರಿ, ಆಸ್ಪತ್ರೆ, ಮೀನುಗಾರಿಕಾ ಹಾಗೂ ಇನ್ನಿತರೆ ಅವಶ್ಯಕತೆಗಳನ್ನು ಪೂರೈಸಲು ಸಹಕಾರಿಯಾಗಲಿದೆ. ಆದ್ದರಿಂದ ತುರ್ತಾಗಿ ಗಣನೆಗೆ ತೆಗೆದುಕೊಂಡು ಪ್ರಥಮ ಆದ್ಯತೆಯ ಮೇರೆಗೆ ಅನುಮೊದನೆ ದೊರಕಿಸಿಕೊಡಬೇಕೆಂದು ಸಂಸದರು ಒತ್ತಾಯಿಸಿದರು.

ಈ ಎರಡೂ ಪ್ರಸ್ತಾವನೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ ಕೇಂದ್ರ ಬಂದರು, ಹಡಗು ಹಾಗೂ ಜಲಸಾರಿಗೆ ಸಚಿವರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಈ ಯೋಜನೆಗಳ ಬಗ್ಗೆ ಪತ್ರ ಬರೆದಿದ್ದು ಪಿಪಿಪಿ ಮಾದರಿಯಲ್ಲಿ ಮಲ್ಟಿಪರ್ಪಸ್ ಹಾರ್ಬರ್ (ಬಹುಪಯೋಗಿ ಬಂದರು) ನಿರ್ಮಿಸಲು ಶೀಘ್ರವಾಗಿ ಟೆಂಡರ್ ಕರೆಯಲು ಸಂಬಂದಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಹಾಗೂ ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಿಸಲು ಆದಷ್ಟೂ ತ್ವರಿತವಾಗಿ ಸಕಾರಾತ್ಮಕವಾಗಿ ಪರಿಗಣಿಸುವ ಭರವಸೆ ನೀಡಿದರು.

ಈ ಎರಡೂ ಯೋಜನೆಗಳಿಗೆ ಕರ್ನಾಟಕ ಸರಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

ಸಭೆಯಲ್ಲಿ ಕೇಂದ್ರ ಸಹಾಯಕ ಸಚಿವರಾದ ಶ್ರೀಪಾದ್ ನಾಯಕ್, ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ್, ಮೂಲಭೂತ ಸೌಕರ್ಯ ಅಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಾಳಾದ ಗೌರವ್ ಗುಪ್ತ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!