Sunday, September 8, 2024

ಗಂಗೊಳ್ಳಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಉದ್ಘಾಟನೆ

ಸಮೃದ್ಧ ಯುವಶಕ್ತಿಯನ್ನು ಹೊಂದಿರುವ ನಮ್ಮ ದೇಶದಲ್ಲಿ ಯುವ ಜನರು ಮಾದಕ ವಸ್ತುಗಳಿಗೆ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಸುಮಾರು ೧೮-೨೪ ವರ್ಷದೊಳಗಿನ ಯುವಕರು ಮದ್ಯಪಾನ ಸೇರಿದಂತೆ ಗಾಂಜಾ, ಅಪೀಮು ಮುಂತಾದ ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಜೀವನವನ್ನೇ ಬಲಿ ಕೊಡುತ್ತಿದ್ದಾರೆ. ಕ್ಯಾನ್ಸರ್ ಮತ್ತಿತರ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಇಡೀ ಕುಟುಂಬ ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಆದ್ದರಿಂದ ಯುವ ಜನತೆ ದಾರಿ ತಪ್ಪದಂತೆ, ದುಶ್ಚಟಗಳಿಗೆ ಬಲಿಯಾಗದಂತೆ ಸನ್ಮಾರ್ಗದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಬೇಕಾಗಿದೆ ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು,

ಜನಜಾಗೃತಿ ವೇದಿಕೆಯ ಸಂಪನ್ಮೂಲ ವ್ಯಕ್ತಿ ಸತೀಶ ಎಂ.ನಾಯಕ್ ಮಾಹಿತಿ ಮಾರ್ಗದರ್ಶನ ನೀಡಿದರು. ಸ.ವಿ.ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕಿ ಶ್ರೀಲತಾ ನಾಯ್ಕ್, ಜನಜಾಗೃತಿ ವೇದಿಕೆ ಸದಸ್ಯರಾದ ಬಿ.ರಾಘವೇಂದ್ರ ಪೈ, ವಾಸುದೇವ ಆಚಾರಿ, ಸ್ವಸಹಾಯ ಸಂಘಗಳ ತ್ರಾಸಿ ವಲಯ ಅಧ್ಯಕ್ಷ ನಾಗರಾಜ ಖಾರ್ವಿ, ಎಂ.ಜಿ.ರೋಡ್ ಒಕ್ಕೂಟ ಮಾಜಿ ಅಧ್ಯಕ್ಷ ಗಣೇಶ ಮಡಿವಾಳ ಉಪಸ್ಥಿತರಿದ್ದರು.

ಸ್ವಾತಿ ಮಡಿವಾಳ ಸ್ವಾಗತಿದರು. ಬೈಂದೂರು ತಾಲೂಕು ಪ್ರಭಾರ ಯೋಜನಾಧಿಕಾರಿ ಶಶಿರೇಖಾ ಪಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ತ್ರಾಸಿ ವಲಯ ಮೇಲ್ವಿಚಾರಕ ಗಿರೀಶ ಕಾರ್ಯಕ್ರಮ ನಿರ್ವಹಿಸಿದರು. ಸೇವಾ ಪ್ರತಿನಿಧಿ ವನಜಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!