Sunday, September 8, 2024

ಪ.ಜಾತಿ, ಪ.ಪಂಗಡ ಬಿಪಿ‌ಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನ-ಸಚಿವ ಕೋಟ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿ‌ಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಮಂಗಳವಾರ ೨೦೨೨-೨೩ನೇ ಸಾಲಿನ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು, ಪರಿಶಿಷ್ಟ ಜಾತಿ, ಪಂಗಡದ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ ೭೫ಯೂನಿಟ್ ವಿದ್ಯುತ್ ಸರಬರಾಜು ಮಾಡುವ ಯೋಜನೆ ರೂಪಿಸಿದ್ದು ಇಂಧನ ಇಲಾಖೆ ಅಧಿಕಾರಿಗಳು ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕೆಂದು ಅವರು ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 20 ಸಾವಿರ ರೂ.ಗಳ ಘಟಕ ಯೋಜನೆಯ ಸಹಾಯಧನದಲ್ಲಿ ಸ್ವಚ್ಚ ಭಾರತ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಅವರು ತಿಳಿಸಿದರು.

ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ವಿಶೇಷವಾಗಿ ಈ ಸಮುದಾಯಕ್ಕೆ ವಸತಿ ಯೋಜನೆ ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ರಾಜ್ಯದಲ್ಲಿ ಶಾಲಾ ಕಟ್ಟಡಗಳ ಅವಶ್ಯಕತೆ ಇದ್ದು, ಶೇ.೫೦ಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳು ಇರುವ ಶಾಲೆಗಳ ಕಟ್ಟಡ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಶೀಘ್ರವೇ ಕೈಗೆತ್ತಿಕೊಳ್ಳುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಇಲಾಖೆ ಆಯುಕ್ತ ಡಾ.ಕೆ.ರಾಕೇಶ್ ಕುಮಾರ್, ಇಲಾಖೆ ಸಲಹೆಗಾರರಾದ ಡಾ.ವೆಂಕಟಯ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!