Friday, April 19, 2024

ಒತ್ತಡವನ್ನು ಸಮಾಧಾನದಿಂದ ಬಗೆಹರಿಸಿಕೊಳ್ಳಬೇಕು-ಡಿವೈ‌ಎಸ್‌ಪಿ ಶ್ರೀಕಾಂತ್

ಕುಂದಾಪುರ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಒತ್ತಡ ಸಾಮಾನ್ಯ. ಅದನ್ನು ಸಮಾಧಾನವಾಗಿ ಬಗೆಹರಿಸುವ ಕಲೆ ನಾವೆಲ್ಲ ಅರಿತರೆ ಆರೋಗ್ಯವಂತ ಜೀವನವನ್ನು ನಡೆಸಬಹುದು. ಸಮಾಜದಲ್ಲಿ ಪ್ರತಿಯೊಂದು ವ್ಯವಸ್ಥೆಗೂ ಪರ್ಯಾಯ ವ್ಯವಸ್ಥೆ ಇದೆ. ಆದರೆ ಪೊಲೀಸ್ ಇಲಾಖೆಗೆ ಪರ್ಯಾಯವಾದ ವ್ಯವಸ್ಥೆ ಇಲ್ಲ. ಹಾಗಾಗಿ ನಾವು ಜನಸೇವಕರಾಗಿ ಜನರ ಕಷ್ಟಗಳನ್ನು ಹೋಗಲಾಡಿಸುವತ್ತ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀಕಾಂತ್ ಕೆ ಹೇಳಿದರು.

ಕುಂದಾಪುರ ವ್ಯಾಸರಾಜ ಸಭಾಭವನ ದಲ್ಲಿ ನಡೆದ ಉಡುಪಿ ಜಿಲ್ಲಾ ಪೊಲೀಸ್ ಮತ್ತು ಜೇಸಿ‌ಐ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ಉಪ-ವಿಭಾಗ ಮಟ್ಟದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಒಂದು ದಿನದ ಒತ್ತಡ ನಿರ್ವಹಣೆ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೇಸಿ‌ಐ ಕುಂದಾಪುರ ಇದರ ಅಧ್ಯಕ್ಷರಾದ ನಾಗರತ್ನ ಹೇರ್ಳೆ ಮಾತನಾಡಿ ಹಗಲಿರುಳೆನ್ನದೆ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸುತ್ತಿರುವ ಪೊಲೀಸರಿಗೆ ತರಬೇತಿ ನೀಡಲು ಅವಕಾಶ ಸಿಕ್ಕಿರುವುದು ನಮ್ಮ ಸಂಸ್ಥೆಗೆ ಹೆಮ್ಮೆಯ ವಿಷಯ. ತರಬೇತಿಯ ಸದುಪಯೋಗವನ್ನು ಎಲ್ಲರೂ ಪಡೆದುಕೊಂಡರೆ ನಮ್ಮ ಶ್ರಮ ಸಾರ್ಥಕ ಎಂದರು.

ಈ ಸಂದರ್ಭದಲ್ಲಿ ತರಬೇತುದಾರರಾದ ಜೇಸಿ ಜಗದೀಶ್ ಜೋಗಿ, ವಲಯ ತರಬೇತುದಾರರಾದ ಜೇಸಿ ಅಕ್ಷತಾ ಗಿರೀಶ್ ಐತಾಳ್, ಜೇಸಿ‌ಐ ಕುಂದಾಪುರ ಇದರ ಕಾರ್ಯದರ್ಶಿ ಜೇಸಿ ರಾಕೇಶ್ ಶೆಟ್ಟಿ, ನಿರಂಜನ ಗೌಡ ಪೊಲೀಸ್ ಉಪ ನಿರೀಕ್ಷಕರು, ಗ್ರಾಮಾಂತರ ಪೊಲೀಸ್ ಠಾಣೆ, ಕಂಡ್ಲೂರು, ಸದಾಶಿವ ಗೌರೋಜಿ, ಪೊಲೀಸ್ ಉಪ ನಿರೀಕ್ಷಕರು, ಕುಂದಾಪುರ ಪೊಲೀಸ್ ಠಾಣೆ ಇವರು ಉಪಸ್ಥಿತರಿದ್ದರು.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಮಧುಸೂದನ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!