spot_img
Wednesday, January 22, 2025
spot_img

ಕಾಲ್ತೋಡು: ಕಾಲುಸಂಕದಿಂದ ಬಿದ್ದು ಬಾಲಕಿ ನೀರುಪಾಲು

ಬೈಂದೂರು, ಆ.8: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯಾತಪ್ಪಿ ಹಳ್ಳಕ್ಕೆ ಬಿದ್ದು 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಸೋಮವಾರ ಸಂಜೆ ಕಾಲ್ತೋಡು ಗ್ರಾಮದ ಬೊಳಂಬಳ್ಳಿಯಲ್ಲಿ ನಡೆದಿದೆ.

ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ (7 ವ) ನೀರು ಪಾಲಾಗಿದ್ದು ಹುಡುಕಾಟ ತೀವ್ರಗೊಂಡಿದೆ.

ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ ಎರಡನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬಿಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು, ಈ ಕಾಲು ಸಂಕ ದಾಟುವಾಗ ಮಗು ಆಯಾತಪ್ಪಿ ಹಳ್ಳಕ್ಕೆ ಬಿದ್ದಿದೆ. ಕೂಡಲೇ ವಿಷಯ ತಿಳಿದು ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದಾರೆ. ಈ ಹಳ್ಳ ಬೋಳಂಬಳ್ಳಿ ನದಿಗೆ ಸೇರುತ್ತಿದ್ದು, ನೀರಿನ ರಭಸ ಜೋರಾಗಿದ್ದು ನೀರಿನ ಸಳೆತಕ್ಕೆ ಮಗು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ. ಶೋಧ ಕಾರ್ಯ ನಡೆಯುತ್ತಿದೆ.

ಸ್ಥಳಕ್ಕೆ ಜಿ.ಪಂ.ಮಾಜಿ ಅಧ್ಯಕ್ಷ ರಾಜು ಪೂಜಾರಿ, ತಹಶೀಲ್ದಾರ್ ಕಿರಣ್ ಗೋರಯ್ಯ, ಎಸ್.ಐ ಪವನ್ ನಾಯ್ಕ್, ಗ್ರಾ.ಪಂ.ಮಾಜಿ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಮೊದಲಾದವರು ಭೇಟಿ ನೀಡಿದ್ದಾರೆ.

ಈ ಕಾಲುಸಂಕ ಅತ್ಯಂತ ಅಪಾಯಕಾರಿಯಾಗಿದ್ದು ಹಿಡಿಕೆಗಳು ಕೂಡಾ ಇಲ್ಲ. ಮಳೆಗೆ ಮರದ ತುಂಡುಗಳು ಜಾರುತ್ತವೆ. ನೀರು ರಭಸವಾಗಿ ಹರಿಯುತ್ತಿದೆ. ಇಂಥಹ ಅಪಾಯಕಾರಿ ಕಾಲುಸಂಕ ಇನ್ನೂ ವ್ಯವಸ್ಥೆಯ ಕಣ್ಣಿಗೆ ಗೋಚರವಾಗದೇ ಇರುವುದು ದುರಾದೃಷ್ಟಕರ.

ಸಾರ್ವಜನಿಕರ ಆಕ್ರೋಶ:
ಇಲ್ಲಿ ಕಿರು ಸೇತುವೆ ನಿರ್ಮಿಸುವಂತೆ ಸಾರ್ವಜನಿಕರು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಲೇ ಬಂದಿದ್ದಾರೆ. ಗ್ರಾಮ ಪಂಚಾಯತ್ ಕೂಡಾ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಇಲ್ಲಿ ಕಿರು ಸೇತುವೆ ನಿರ್ಮಾಣ ಮಾಡದ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಭೇಟಿ
ನೀರು ಪಾಲಾದ ಬಾಲಕಿ ಸನ್ನಿಧಿ ಮನೆಗೆ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಭೇಟಿ ನೀಡಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!