spot_img
Wednesday, January 22, 2025
spot_img

ಬೈಂದೂರು : ಕಾಂಗ್ರೆಸ್ ಮಹಿಳಾ ಸಮಿತಿ ವತಿಯಿಂದ ರಕ್ಷಾ ಬಂಧನ ಆಚರಣೆ

ಬೈಂದೂರು: ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ಬೈಂದೂರು ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಗುರುವಾರ ನಡೆಯಿತು.

ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ ಅವರು ಮಾತನಾಡಿ, ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ. ಇತ್ತೀಚೆಗೆ ಯುವ ಜನತೆಗೆ ಪಾಶ್ಚಾತ್ಯ ಆಚರಣೆಗಳ ಮೇಲೆ ಮೋಹ ಹೆಚ್ಚಾಗಿದೆ. ಅವರಿಗೆ ಸಂಬಂಧಗಳ ಮೌಲ್ಯ ಸಾರುವ ರಕ್ಷಾ ಬಂಧನದಂತಹ ಹಬ್ಬಗಳ ಮಹತ್ವ ತಿಳಿಸಿಕೊಡುವ ಕೆಲಸ ಆಗಬೇಕಿದೆ. ಬೆಲೆ ಕಟ್ಟಲಾಗದ ಸಂಬಂಧವೆಂದರೆ ಅದು ಅಣ್ಣ-ತಂಗಿಯ ಸಂಬಂಧ. ಅವರ ನಡುವಿನ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯದೆ ಉಳಿಯಲು ಪ್ರತೀ ವರ್ಷ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ ಎಂದರು.

ಬೈಂದೂರು ಕಾಂಗ್ರೆಸ್ ಮಹಿಳಾ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.

ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಾನಕಿ ಮೊಗವೀರ ಉಪಸ್ಥಿತರಿದ್ದರು.
ಬೈಂದೂರು ಕಾಂಗ್ರೆಸ್ ಮಹಿಳಾ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು, ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮುಖಂಡರು ಭಾಗವಹಿಸಿದ್ದರು.

ಇತ್ತೀಚೆಗೆ ಬೋಳಂಬಳ್ಳಿ ವ್ಯಾಪ್ತಿ ಬೀಜಮಕ್ಕಿಯ ಕಾಲು ಸಂಕ ದಾಟುವ ವೇಳೆ ಆಯತಪ್ಪಿ ನೀರು ಪಾಲಾದ ಪುಟ್ಟ ಬಾಲಕಿ ಸನ್ನಿಧಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!