spot_img
Tuesday, April 7, 2026
spot_img

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ‘ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನ’

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಮೋರ್ಚಾ ಅಧ್ಯಕ್ಷರಾದ ಫಿರೋಜ್ ಕುಂದಾಪುರ ಇವರ ನೇತೃತ್ವದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಣೆಯಂತೆ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನವನ್ನು ಕುಂದಾಪುರದಲ್ಲಿ ಹಮ್ಮಿಕೊಳ್ಳಲಾಯಿತು.

ಕುಂದಾಪುರ ಪಾರಿಜಾತ ಕ್ಯಾಬ್ ಚಾಲಕರು ಹಾಗೂ ಮಾಲಕರು ಸ್ಥಳೀಯರ ಜೊತೆ ಸೇರಿ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಸಲಹಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮುತ್ತಲಿ ವಂಡ್ಸೆ ಭಾಗವಹಿಸಿ 75ನೇ ಅಮೃತಮಹೋತ್ಸವದ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್, ಉಪಾಧ್ಯಕ್ಷರಾದ ಇರ್ಷಾದ್ ಕೋಟೇಶ್ವರ ಹಾಗೂ ರಹೀಮ್ ಕುಂದಾಪುರ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!