spot_img
Tuesday, April 7, 2026
spot_img

ಆಜಾದಿ-ಕಾ ಅಮೃತ ಮಹೋತ್ಸವ: ಉಪನ್ಯಾಸ ಕಾರ್ಯಕ್ರಮ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಜಾದಿ-ಕಾ ಅಮೃತಮಹೋತ್ಸವದ ಅಂಗವಾಗಿ “ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು” ಈ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರರವರು ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರಿನ ಮುಖ್ಯ ಶಿಕ್ಷಕರಾಗಿರುವ ಅಬ್ದುಲ್ ರವೂಫ್ ರವರು ದೇಶದ “ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು “ ಈ ಕುರಿತು ಉಪನ್ಯಾಸ ನೀಡಿದರು.

ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವಾರ, ಕಾಲೇಜಿನ ಉಪಪ್ರಾಂಶುಪಾಲರಾಗಿರುವ ಶ್ರೀ ರಮೇಶ್ ಪೂಜಾರಿ ಉಪಸ್ಥಿತರಿದ್ದರು.

ಆಂಗ್ಲಭಾಷಾ ಉಪನ್ಯಾಸಕಿ ಪ್ರಿಯಾಂಕ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಅಭಿಜಿತ್ ಬಹುಮಾನ ವಿಜೇತರ ಯಾದಿಯನ್ನು ವಾಚಿಸಿ, ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!