spot_img
Monday, April 13, 2026
spot_img

ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕ: ಸ್ವಾತಂತ್ರ್ಯದ ಅಮೃತ ಮಹೋತ್ಸವ

ಬೈಂದೂರು: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಬೈಂದೂರು-ಶಿರೂರು ಘಟಕದ ಆಡಳಿತ ಕಛೇರಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ಗೌರವ ಸಲಹೆಗಾರರಾದ ರಾಮ ಎನ್. ಅಳ್ವೆಗದ್ದೆ ಧ್ವಜಾರೋಹಣ ನೆರವೇರಿಸಿದರು. ಘಟಕದ ಅಧ್ಯಕ್ಷ ರವಿರಾಜ ಚಂದನ ಕಳವಾಡಿ ಸಭಾಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಸಂಘಟನೆಯ ಸಂಘಟನಾ ಕಾರ್ಯದರ್ಶಿ ಗಂಗಾಧರ ಮೊಗವೀರ ಪಡುವರಿ, ನಿಕಟಪೂರ್ವ ಅಧ್ಯಕ್ಷ ವಸಂತ್ ಬಿ. ತಗ್ಗರ್ಸೆ, ಕಾರ್ಯದರ್ಶಿ ಗೌತಮ್ ತಗ್ಗರ್ಸೆ, ಕೋಶಾಧಿಕಾರಿ ಸೋಮಶೇಖರ ಕಸ್ಟಮ್ ಹಾಗೂ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು, ಗುರಿಕಾರರು, ನಾಗರೀಕರು ಉಪಸ್ಥಿತರಿದ್ದರು.


ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ಯಾಮಲಾ ಕುಂದರ್ ಪ್ರಾಯೋಜಕತ್ವದಲ್ಲಿ ಸಿಹಿತಿಂಡಿ ವಿತರಿಸಲಾಯಿತು. ಹಾಗೂ ಮುಂಬೈನ ಸ್ಟೇಟಸ್ ಹೋಟೆಲ್‌ನ ಮಾಲಿಕರಾದ ರತ್ನಾಕರ್ ಚಂದನ್ ಉಪ್ಪುಂದ ಉಪಹಾರದ ವ್ಯವಸ್ಥೆ ಒದಗಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!