spot_img
Saturday, April 11, 2026
spot_img

ಕುಂದಾಪುರ ತಾ. ಗಾಣಿಗ ಸಂಘದ ಮಾಜಿ ಅಧ್ಯಕ್ಷ ಕೆ. ಕೊಗ್ಗ ಗಾಣಿಗ ನಿಧನ

ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಮಾಜಿ ಅಧ್ಯಕ್ಷ, ಕುಂದಾಪುರ ಮದ್ದುಗುಡ್ಡೆ ನಿವಾಸಿ, ನಿವೃತ್ತ ಶಿಕ್ಷಕ, ಕೆ.ಕೊಗ್ಗ ಗಾಣಿಗ (71) ಅವರು ಅಲ್ಪಕಾಲದ ಅಸೌಖ್ಯದಿಂದ ಆಗಸ್ಟ್ 17ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ಜಿಲ್ಲಾ ಸ್ಕೌಟ್ಸ್ & ಗೈಡ್‌ನ ಪ್ರಸ್ತುತ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದ ಇವರು ಅಪಾರ ಶಿಕ್ಷಕ ವೃಂದ ಹಾಗೂ ಅಭಿಮಾನಿಗಳನ್ನು ಹೊಂದಿದ್ದರು. ಸ್ಕೌಟ್ಸ್ & ಗೈಡ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಇವರು ಸಮಾಜಮುಖಿಯಾಗಿ ತೊಡಗಿಸಿಕೊಂಡಿದ್ದರು.

ಕುಂದಾಪುರದ ಹಿಂದೂ ಕಿರಿಯ ಪ್ರಾಥಮಿಕ ಶಾಲೆ, ಸೇಂಟ್ ಮೇರಿಸ್ಕೂಲ್, ಮಾದ್ಯಮಿಕ ಶಿಕ್ಷಣ ಮತ್ತು ಪಿಯುಸಿ ಶಿಕ್ಷಣವನ್ನು ಬೋರ್ಡ್ ಸ್ಕೂಲಿನಲ್ಲಿ ಮುಗಿಸಿ ಉಡುಪಿಯಲ್ಲಿ ಶಿಕ್ಷಕ ತರಬೇತಿಯನ್ನು ಮುಗಿಸಿದ ಅವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯಾರಂಭಿಸಿದ ಅವರು ಅವರು ಭಾರತ ಸ್ಕೌಟ್ ಮತ್ತು ಗೈಡ್ಸನಲ್ಲಿ ತನ್ನದೇಯಾದ ಛಾಪು ಮೂಡಿಸಿದರು.

ಸ್ಕೌಟ್ ಮತ್ತು ಗೈಡ್ ಸಂಘಟನೆಯನ್ನು ಕಟ್ಟಿ ಬೆಳೆಸಿದ ಅವರಿಗೆ ಉಡುಪಿ ಜಿಲ್ಲೆಯ ಸ್ಕೌಟ ಮತ್ತು ಗೈಡ್‌ನ ಅಧ್ಯಕ್ಷ ಸ್ಥಾನ ಲಭಿಸಿತ್ತು.

ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!