spot_img
Friday, May 22, 2026
spot_img

ಗಂಗೊಳ್ಳಿ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

 ರಾಜಕೀಯ ಹಿತಾಸಕ್ತಿಗಳನ್ನು ಪರಿಗಣಿಸದೆ ಸಮುದಾಯದ ಅಭಿವೃದ್ಧಿಯನ್ನೇ ಪ್ರಮುಖವಾಗಿ ಪರಿಗಣಿಸಿ ಆ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿದಾಗ ಮಾತ್ರ ಸಮುದಾಯದ ನೈಜ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದು ನಿವೃತ್ತ ಮೆಸ್ಕಾಂ ಅಧಿಕಾರಿ ಬಾಬಣ್ಣ ಪೂಜಾರಿ ಹೆಬ್ರಿಮನೆ ಅಭಿಪ್ರಾಯಪಟ್ಟರು. 
  ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬಿಲ್ಲವರ ಹಿತರಕ್ಷಣಾ ವೇದಿಕೆಯ ಪ್ರಥಮ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
   ಶಿಕ್ಷಣವೇ ಅಭಿವೃದ್ಧಿಯ ಮೂಲ. ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡುವಲ್ಲಿ ಎಲ್ಲ ಪೋಷಕರು ಮುತುವರ್ಜಿ ವಹಿಸಬೇಕು ಎಂದು ಅವರು ಹೇಳಿದರು.   ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಅಣ್ಣಪ್ಪ ಬಿಲ್ಲವ  ಶುಭ ಹಾರೈಸಿದರು.  ಲೀಲಾವತಿ ಪೂಜಾರಿ ವಿದ್ಯಾರ್ಥಿ ವೇತನ ವಿತರಿಸಿದರು.
ಕಾರ್ಯಕ್ರಮದಲ್ಲಿ ಮುತ್ತ ಕುಂದರ್, ಜಿ.ಕೆ ವೆಂಕಟೇಶ್ ಕೊಡೇರಿ ಮನೆ, ಜಿ.ಎ. ಆರ್ ಲಕ್ಷ್ಮಣ  ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ  ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ  ಇವರನ್ನು ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. 
ಕಳೆದ ಸಾಲಿನ  ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ರಾಂಕ್ ಗಳಿಸಿದ ರಕ್ಷಿತಾ ಆರ್ ಪೂಜಾರಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ನಿಶಾ ಬಿ ಪೂಜಾರಿ ಹಾಗು ಹರ್ಷಿತ ಎಸ್ ಪೂಜಾರಿಯವರನ್ನು ಸನ್ಮಾನಿಸಲಾಯಿತು.
   ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು  ಮಂಜುರಾಜ್ ಗಂಗೊಳ್ಳಿ ಸ್ವಾಗತಿಸಿದರು. ಅಕ್ಷತಾ ವಿನಯ್ ಪ್ರಾರ್ಥಿಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ  ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು.  ಆಕಾಶ್ ಪೂಜಾರಿ ಧನ್ಯವಾದ ಅರ್ಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!