spot_img
Friday, May 22, 2026
spot_img

ಕೊಂಡಳ್ಳಿಯಲ್ಲಿ ಸಮವಸ್ತ್ರ ವಿತರಣೆ

ಕುಂದಾಪುರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸ.ಹಿ.ಪ್ರಾ.ಶಾಲೆ ಕೊಂಡಳ್ಳಿಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಉದಯ ಕುಮಾರ ಶೆಟ್ಟಿ ಗಿರ್ವಾಡಿ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ನೀರ್ಕೋಡು ಚಂದ್ರಶೇಖರ ಶೆಟ್ಟಿಯವರು ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಸುಮಾರು 35,000 ರೂಪಾಯಿ ಮೌಲ್ಯದ ಸಮವಸ್ತ್ರವನ್ನು ವಿತರಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಗಿರ್ವಾಡಿ ಉದಯ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಕೀಲರಾದ ಉಮೇಶ ಶೆಟ್ಟಿ ಶಾನ್ಕಟ್ಟು, ಶಂಕರನಾರಾಯಣದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮೆನೇಜರ್ ಚಂದ್ರಶೇಖರ ಶೆಟ್ಟಿ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಉದಯಕುಮಾರ ಶೆಟ್ಟಿ ಉಪಸ್ಥಿತರಿದ್ದರು.

ಸಹ ಶಿಕ್ಷಕಿ ಶೈಲಜ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಮುಖ್ಯ ಶಿಕ್ಷಕ ಗೋವಿಂದ ಎಸ್ ಸ್ವಾಗತಿಸಿ. ರಾಮ ಮೊಗವೀರ ವಂದಿಸಿದರು. ಸಹಶಿಕ್ಷಕಿ ಸುಜಾತ ಎಚ್, ಗೌರವ ಶಿಕ್ಷಕಿ ಸುಶ್ಮಿತಾ ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!