Sunday, September 8, 2024

ಕೊಲ್ಲೂರು ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಣ ಪಡೆದಿದ್ದು ನನ್ನ ಪುಣ್ಯ-ಗುರುರಾಜ್ ಪೂಜಾರಿ

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕ, ಬಾಲಕಿಯರ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆ ಶುಕ್ರವಾರ ಕೊಲ್ಲೂರು ಮೂಕಾಂಬಿಕಾ ಸಭಾಭವನದಲ್ಲಿ ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಕೊಲ್ಲೂರು ವಿದ್ಯಾ ಸಂಸ್ಥೆಯ ಹಳೆ ವಿದ್ಯಾರ್ಥಿ ಗುರುರಾಜ ಪೂಜಾರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕ ಪಡೆದು ಅವರನ್ನು ಸನ್ಮಾನಿಸುತ್ತಿರುವುದು ಸಂತೋಷ ತಂದಿದೆ ಕೊಲ್ಲೂರಿನಲ್ಲಿ ಕಲಿತ ಗುರುರಾಜ್ ಪೂಜಾರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಗಳಿಸಿ ಹುಟ್ಟೂರಿಗೆ ಗೌರವ ತಂದಿದ್ದಾರೆ 2023ರ ಒಲಂಪಿಕ್‌ನಲ್ಲಿ ಚಿನ್ನದ ಪದಕ ಗಳಿಸಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಪ್ರಕಾಶ್ ಶೆಟ್ಟಿ ವಹಿಸಿದರು. ಕಾಮನ್ವೆಲ್ತ್ ಗೇಮ್‌ನಲ್ಲಿ ಕಂಚಿನ ಪದಕ ವಿಜೇತ ಸಂಸ್ಥೆಯ ಹಳೆ ವಿದ್ಯಾರ್ಥಿ ಗುರುರಾಜ್ ಪೂಜಾರಿ ಅವರನ್ನು ಕೊಲ್ಲೂರು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಗುರುರಾಜ ಪೂಜಾರಿ ಈ ಬಾರಿಯ ಕಾಮನ್ವೆಲ್ತ್ ಗೇಮ್ ನಲ್ಲಿ ರಜತ ಪದಕ ಪಡೆಯುವ ಗುರಿಯಿಂದ 4 ವರ್ಷಗಳಿಂದ ಕಠಿಣ ಪರಿಶ್ರಮ ಪಟ್ಟಿದ್ದು, ಬರ್ಮಿಂಗ್ ಹ್ಯಾಮ್‌ಗೆ ತೆರಳಿದ ನಂತರ ಅನಾರೋಗ್ಯದ ಸಮಸ್ಯೆ ತಲೆದೋರಿತು. ಹೀಗಾಗಿ ಕ್ರೀಡಾಕೂಟದಲ್ಲಿ ಭಾಗವಹಿಸುವುದೇ ಅನುಮಾನವಾಗಿತ್ತು. ಆದರೆ ತಾಯಿ ಮೂಕಾಂಬಿಕೆ , ಕೋಚ್‌ನ ಮಾರ್ಗದರ್ಶನ, ಆತ್ಮವಿಶ್ವಾಸ ಮತ್ತು ಎಲ್ಲರ ಹಾರೈಕೆಯಿಂದ ಗುಣಮುಖನಾಗಿ ಸ್ಪರ್ಧೆಯಲ್ಲಿ ಭಾಗವಹಿಸಿ ತೀವ್ರ ಪೈಪೋಟಿಯ ನಡುವೆ ಕಂಚಿನ ಪದಕ ಪಡೆದು ವೇಯ್ಟ್ ಲಿಫ್ಟಿಂಗ್‌ನ ೬೧ಕೆಜಿ ವಿಭಾಗದಲ್ಲಿ ದೇಶಕ್ಕೆ ಇದೇ ಮೊದಲ ಬಾರಿಗೆ ಪದಕ ಪಡೆದ ಇತಿಹಾಸ ಸೃಷ್ಟಿಸಲು ಸಾಧ್ಯವಾಯಿತು. ನನ್ನ ಈ ಸಾಧನೆಗೆ ಕೊಲ್ಲೂರು ವಿದ್ಯಾ ಸಂಸ್ಥೆಯಲ್ಲಿ ಪಡೆದ ತರಬೇತಿ ಪ್ರೋತ್ಸಾಹ ಮತ್ತು ಮಾರ್ಗದರ್ಶನವನ್ನು ಸ್ಮರಿಸಿದರು. 5 ವರ್ಷ ಕೊಲ್ಲೂರು ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಣ ಪಡೆದಿದ್ದು ನನ್ನ ಪುಣ್ಯ, ನಾನು ಕೊಲ್ಲೂರಿನಲ್ಲಿ ರಾಷ್ಟ್ರಮಟ್ಟದ ಕುಸ್ತಿಪಟುವಾಗಿದ್ದೆ , ಇದೀಗ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗಲು ಪ್ರಮುಖ ಕಾರಣ ಎಂದರು.

ಮುಖ್ಯ ಅತಿಥಿಗಳಾಗಿ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಭಟ್, ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ, ರತ್ನ ರಮೇಶ್ ಕುಂದರ್, ಸಂಧ್ಯಾ ರಮೇಶ್, ಗೋಪಾಲಕೃಷ್ಣ ನಾಡ , ಜಯಾನಂದ ಹೋಬಳಿದಾರ್ ,ಅತುಲ್ ಕುಮಾರ್ ಶೆಟ್ಟಿ , ಗಣೇಶ್ ಕಿಣಿ , ಶೇಖರ್ ಪೂಜಾರಿ ಮತ್ತು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಮಾರುತಿ , ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕ ಸಂಘದ ಅಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ ಹಾಗೂ ಶಾಲಾ ಉಪನ್ಯಾಸಕರು ವಿದ್ಯಾರ್ಥಿಗಳು ಮತ್ತು ಗುರುರಾಜ್ ತಂದೆ,ಪತ್ನಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ಸ್ವಾಗತಿಸಿದರು , ಉಪನ್ಯಾಸಕ ನಾಗರಾಜ ಅಡಿಗ ನಿರೂಪಿಸಿ ವಂದಿಸಿದರು.

ತದನಂತರ ವಿದ್ಯಾರ್ಥಿಗಳೊಂದಿಗೆ ಕಾಮನ್ವೆಲ್ತ್ ಗೇಮ್ ನಲ್ಲಿ ಪದಕ ವಿಜೇತ ಗುರುರಾಜ ಪೂಜಾರಿ ಸಂವಾದ ನಡೆಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!