spot_img
Monday, April 13, 2026
spot_img

ನನ್ನ ಕ್ರೀಡಾ ಜರ್ನಿ ಆರಂಭಗೊಂಡಿದ್ದು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಿಂದ-ಕಾಮನ್‌ವೇಲ್ತ್ ಪದಕ ವಿಜೇತ ಗುರುರಾಜ್ ಪೂಜಾರಿ

ಕೊಲ್ಲೂರು: ಅಂತರಾಷ್ಟ್ರೀಯ ಕ್ರೀಡಾಪಟು ಕಾಮನ್ವೆಲ್ತ್ ಕಂಚಿನ ಪದಕ ವಿಜೇತ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇಲ್ಲಿನ ಪ್ರಾಕ್ತನ ವಿದ್ಯಾರ್ಥಿ ಗುರುರಾಜ್ ಪೂಜಾರಿ ಅವರನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಿ ಗೌರವಿಸಲಾಯಿತು.

ಅಭಿನಂದಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಭಟ್ ನಮ್ಮ ಸಂಸ್ಥೆಯ ಹೆಮ್ಮೆಯ ಹಳೆ ವಿದ್ಯಾರ್ಥಿ, ವಿಶ್ವ ಮಟ್ಟದಲ್ಲಿ ಸಾಧನೆಯನ್ನು ಮಾಡಿದ್ದು ನಮ್ಮೆಲ್ಲರ ಹೆಮ್ಮೆ. ಇವರು ಇನ್ನಷ್ಟು ಸಾಧನೆಯ ಶಿಖರವನ್ನು ಏರಲಿ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗುರುರಾಜ್ ಪೂಜಾರಿ ಇಂತಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದಿದ್ದು ನನ್ನ ಪುಣ್ಯ, ನನ್ನ ಕ್ರೀಡಾ ಜರ್ನಿ ಮೂಕಾಂಬಿಕಾ ಕ್ಷೇತ್ರದಿಂದ ಆರಂಭಗೊಂಡು ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕ ಪಡೆದಿರುವುದು ಸಂತಸ ತಂದಿದೆ, ನೀವೂ ಸಹ ಕ್ರೀಡೆ ಹಾಗೂ ಇನ್ಯಾವುದೇ ವಿಭಾಗದಲ್ಲಿ ಛಲದಿಂದ ಸಾಧನೆ ಮಾಡಿದಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಗುರುರಾಜ್ ಪೂಜಾರಿ ತಂದೆ ಮಹಾಬಲ ಪೂಜಾರಿ, ಪತ್ನಿ ಸೌಜನ್ಯ ಗುರುರಾಜ್ ಹಾಗೂ ಶಾಲಾ ಶಿಕ್ಷಕರಾದ ಗಣಪತಿ, ಅಭಿನೇತ್ರಿ, ಮಂಜುನಾಥ, ದತ್ತಾತ್ರೇಯ, ರೇಖಾ, ಪ್ರತಾಪ್ ಕುಮಾರ್ ಶೆಟ್ಟಿ, ವಿದ್ಯಾರ್ಥಿ ನಾಯಕ ಪುನೀತ್, ನಾಯಕಿ ರಕ್ಷಿತಾ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!