spot_img
Sunday, April 12, 2026
spot_img

ಥ್ರೋಬಾಲ್ ಪಂದ್ಯಾಟ: ಆಲೂರು ಶಾಲೆ ಜಿಲ್ಲಾ ಮಟ್ಟಕ್ಕೆ

ಕುಂದಾಪುರ: ಸ.ಮಾ.ಹಿ.ಪ್ರಾ.ಶಾಲೆ ಬೈಂದೂರು ಇಲ್ಲಿ ನಡೆದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ, ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸ.ಹಿ.ಪ್ರಾ.ಶಾಲೆ ಆಲೂರು ಇಲ್ಲಿನ ಬಾಲಕ ಮತ್ತು ಬಾಲಕಿಯರ ತಂಡಗಳು ಜಯಗಳಿಸಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ತರಬೇತಿ ನೀಡಿದ್ದಾರೆ. ತಂಡದ ವ್ಯವಸ್ಥಾಪಕರಾಗಿ ದಿನಕರ ದೇವಾಡಿಗ, ವಿದ್ಯಾ, ಲಲಿತಾ ಸಹಕರಿಸಿದ್ದರು.

ಶಾಲೆಯನ್ನು ದತ್ತು ಸ್ವೀಕರಿಸಿರುವ ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಚಿತ್ತೂರು ಇದರ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದತ್ತಾತ್ರೇಯ ಭಟ್, ಉಪಾಧ್ಯಕ್ಷೆ ಚಂದ್ರಮತಿ, ಶಾಲಾ ಮುಖ್ಯಶಿಕ್ಷಕರಾದ ಶಶಿಧರ ಶೆಟ್ಟಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!