spot_img
Thursday, May 7, 2026
spot_img

ಸಾಧನೆಗೈದ ಎಕ್ಸಲೆಂಟ್ ಕುಂದಾಪುರದ ವಿದ್ಯಾರ್ಥಿಗಳು: ನಾಲ್ವರು ರಾಜ್ಯ ಮಟ್ಟಕ್ಕೆ ಆಯ್ಕೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಮೂರು ಪದಕ

ಕುಂದಾಪುರ, ಆ.25: ಸುಣ್ಣಾರಿಯ ಎಕ್ಸಲೆಂಟ್ ಸ್ಕೂಲ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮಟ್ಟ ಮತ್ತು ಅಂತರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಸಾಧನೆಗೈಯುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಚಾಪನ್ನು ಮೂಡಿಸುತ್ತಿದ್ದಾರೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ ತಿಳಿಸಿದರು.

ಅವರು ಆ.25ರಂದು ಸುಣ್ಣಾರಿಯ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸುದ್ಧಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳಾದ ಮಾನಸ ಪ್ರಥಮ ಸ್ಥಾನಿಯಾಗಿ ಹಾಗೂ ನಿಹಾಲ್ ಎನ್ ಶೆಟ್ಟಿ ತೃತೀಯ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಉಡುಪಿ ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿರುವ ಏಕೈಕ ಕಾಲೇಜು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಉಡುಪಿ ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆ ಆಯೋಜಿಸಿದ ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪ್ರೌಢ ಶಾಲಾ ವಿದ್ಯಾರ್ಥಿಗಳಾದ ತತ್ವ ಶೆಟ್ಟಿ ಮತ್ತು ಪ್ರಕೃತಿ ಪಿ ಶೆಟ್ಟಿ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದರು.

ಶಿವಮೊಗ್ಗದಲ್ಲಿ ನಡೆದ ಓಪನ್ ೩ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಶ್ಲೇಶ್ ನಾಯಕ ಕುಮಟೆ ವಿಭಾಗದಲ್ಲಿ ಚಿನ್ನದ ಪದಕ, ಕಟಾ ವಿಭಾಗದಲ್ಲಿ ಚಿನ್ನದ ಪದಕ, ಮೊಹಮ್ಮದ್ ಅನೀಸ್ ಕುಮಟೆ ವಿಭಾಗದಲ್ಲಿ ಬೆಳ್ಳಿ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದರೆ, ಆಯುಷ್ ಪುತ್ರನ್ ಇವರು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಕುಮಟೆ ವಿಭಾಗದಲ್ಲಿ ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದು ಹೇಳಿದರು.

ಈ ಭಾಗದ ವಿದ್ಯಾರ್ಥಿಗಳನ್ನು ಕ್ರೀಡಾ ಕ್ಷೇತ್ರದಲ್ಲಿ ಹುರಿದುಂಬಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಪಿಯುಸಿ ವಿಭಾಗದ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸುತ್ತಿದ್ದೇವೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆಗಳನ್ನು ನೀಡಲಾಗುತ್ತಿದೆ. ನಮ್ಮ ಸಂಸ್ಥೆ ಶಿಕ್ಷಣ, ಕಲ್ಬರಲ್ ಮತ್ತು ಸ್ಪೋಟ್ಸ್‌ನಲ್ಲಿ ಟ್ಯಾಲೆಂಟ್ ಇದ್ದ ವಿದ್ಯಾರ್ಥಿಗಳಿಗೆ ಶ್ರೀ ಎಜುಕೇಶನ್ ಫೆಸಿಲಿಟಿಯನ್ನು ಈ ಭಾಗದ ವಿದ್ಯಾರ್ಥಿಗಳಿಗೆ ಸಹಕಾರಿಯಾಗುವ ರೀತಿಯಲ್ಲಿ ಸಮಾಜಮುಖಿಯಾಗಿ ಸಮಾಜದೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದರು.

ಸಂಸ್ಥೆಯಲ್ಲಿ ಕ್ರೀಡೆಯೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಪ್ರತಿಭಾ ಕಾರಂಜಿಯನ್ನು ಆಯೋಜಿಸಲು ಚಿಂತನೆ ನಡೆಸಲಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಸಂಸ್ಥೆ ಬದ್ದವಾಗಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಸಂಸ್ಥೆಯ ಕೋಶಾಧಿಕಾರಿ ಭರತ್ ಶೆಟ್ಟಿ, ಹಾಗೂ ಶಿಕ್ಷಕರಾದ ಸತೀಶ, ಜಯಲತಾ, ನಾಗರಾಜ ಶೆಟ್ಟಿ ಹಾಗೂ ವಿಜೇತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!